ಚಿಕ್ಕಮಗಳೂರು : ಸಚಿವ ಸಿ.ಟಿ ರವಿ ಹೇಳಿಕೆ ಖಂಡಿಸಿ ಚಿಕ್ಕಮಗಳೂರು ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬ್ಯಾಟರಿಗಳನ್ನ ಹಿಡಿದುಕೊಂಡು ವಿನೂತನ ಪ್ರತಿಭಟನೆ ನಡೆಸಿದ್ರು. ಕಾಂಗ್ರೆಸ್ ಸರ್ಕಾರವಿದ್ದಾಗ ಆರ್.ಎಸ್.ಎಸ್ ಅನ್ನು ನಿಷೇಧ ಮಾಡಲು ಸಿದ್ದರಾಮಯ್ಯನವರಿಗೆ ಬ್ಯಾಟರಿ ಇರಲಿಲ್ವಾ ಎಂದು ಸಚಿವ ಸಿ.ಟಿ ರವಿ 2 ದಿನಗಳ ಹಿಂದೆ ಪ್ರಶ್ನೆ ಮಾಡಿದ್ರು. ಇದನ್ನ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಬ್ಯಾಟರಿಗಳನ್ನು ಇಟ್ಟುಕೊಂಡು ಪ್ರತಿಭಟಿಸಿದ್ರು. ಅಲ್ಲದೇ ಸಿ.ಟಿ ರವಿ ಬ್ಯಾಟರಿ ಸೆಂಟರ್ ಅನ್ನೋ ಕಟೌಟ್ ಗಳನ್ನು ಹಿಡಿದುಕೊಂಡು ಆಕ್ರೋಶ ವ್ಯಕ್ತಪಡಿಸಿದರು. ಸಚಿವ ಸಿ.ಟಿ ರವಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕೈ ಕಾರ್ಯಕರ್ತರು, ಸಚಿವರು ಕೂಡಲೇ ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು, ಮಾಜಿ ಸಿಎಂ ಸಿದ್ದರಾಮಯ್ಯನವರಲ್ಲಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು..
ಸಚಿನ್ ಶೆಟ್ಟಿ, ಚಿಕ್ಕಮಗಳೂರು.