ಚಿಕ್ಕಮಗಳೂರು : ದಿನದಿಂದ ದಿನಕ್ಕೆ ಕೊರೋನಾ ತನ್ನ ವಿಸ್ತಾರವನ್ನು ಹೆಚ್ಚಿಸಿಕೊಳ್ಳುತ್ತಿದ್ದು ಡಿ.ಸಿ ಹೋಂ ಕ್ವಾರಂಟೈನ್ ಬೆನ್ನಲ್ಲೇ ಚಿಕ್ಕಮಗಳೂರು ಎಸ್.ಪಿ ಸಹಾ ವರ್ಕ್ ಫ್ರಮ್ ಹೋಮ್ ಮಾಡಲು ವೈದ್ಯರು ಸಲಹೆ ನೀಡಿದ್ದಾರೆ. ಎಸ್.ಪಿ ಕಚೇರಿಯಲ್ಲಿ ನಾಲ್ವರಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಎಸ್.ಪಿ ಕಚೇರಿಯನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದ್ದು ಎಸ್.ಪಿ ಹಕಾಯ್ ಅಕ್ಷಯ್ ಮಚ್ಚಿಂದ್ರ ಅವರು ಮನೆಯಿಂದಲೇ ಕಾರ್ಯ ನಿರ್ವಹಿಸಬೇಕಾಗಿದೆ. ಈ ಮೂಲಕ ಕೊರೋನಾ ಕದಂಬ ಬಾಹು ಎಲ್ಲೆಡೆ ವ್ಯಾಪಕವಾಗಿ ಆವರಿಸಿಕೊಳ್ಳುತ್ತಿದೆ ಹಾಗಾಗಿ ವೈದ್ಯರ ಸಲಹೆ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೂಡ ವರ್ಕ್ ಫ್ರಂ ಹೋಮ್ ಮಾಡಲು ನಿರ್ಧರಿಸಿದ್ದಾರೆ.
ಸಚಿನ್ ಶೆಟ್ಟಿ ಚಿಕ್ಕಮಗಳೂರು.