ಕೋಲಾರ : ಕೋಲಾರ ಜಿಲ್ಲೆಯಲ್ಲಿ ಕೊರೋನಾ ಸೋಂಕು ಮುಂದುವರೆದಿದೆ. ಸೋಂಕನ್ನ ತಡೆಗಟ್ಟಲು ಜಿಲ್ಲಾಡಳಿತ, ಸ್ಥಳೀಯ ಸಂಸ್ಥೆಗಳು ಸೋಂಕು ತಡೆಗಟ್ಟಲು ಮುಂಜಾಗ್ರತೆ ಕೈಗೊಂಡಿದೆ. ಆದ್ರೂ ಜಿಲ್ಲೆಯಲ್ಲಿ ದಿನೇ ದಿನೇ ಸೋಂಕಿತರು ಏರಿಕೆಯಾಗುತ್ತಲೆ ಇದ್ದಾರೆ. ಇದೀಗ ಕೋಲಾರ ನಗರಸಭೆ ಸಿಬ್ಬಂದಿ ರಾತ್ರಿ ವೇಳೆಯೂ ಕೊರೋನಾ ಸೋಂಕು ತಡೆಗಟ್ಟುವ ಬಗ್ಗೆ ಪ್ರಚಾರ ನಡೆಸುತ್ತಿದ್ದಾರೆ. ನಗರದ ಜನ ಸಂದಣಿ ಪ್ರದೇಶಗಳಲ್ಲಿ ಮೈಕ್ ಹಿಡಿದು ನಗರಸಭೆ ಸಿಬ್ಬಂದಿ ಸೋಂಕಿನ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳುವಂತೆ ಸಾರ್ವಜನಿಕರಿಗೆ ಕರೆ ನೀಡಿದರು. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ರು. ನಗರದಲ್ಲಿ ಸ್ವಚ್ಚತೆಯನ್ನ ಕಾಪಾಡುವಂತೆಯೂ ಪ್ರಚಾರ ಮಾಡಲಾಯಿತು.
ಆರ್.ಶ್ರೀನಿವಾಸಮೂರ್ತಿ, ಪವರ್ ಟಿವಿ, ಕೋಲಾರ.