ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನರಾಗಿದ್ದಾರೆ. ಕೊರೋನಾ ಸೋಂಕು ಹಿನ್ನೆಲೆ ಚಿಕಿತ್ಸೆ ಪಡೆಯುತ್ತಿದ್ದ ಪ್ರಣಬ್ ಮುಖರ್ಜಿ ಇಂದು ಸೇನಾ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಪ್ರಣಬ್ ಮುಖರ್ಜಿ ಆಗಸ್ಟ್ 10ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಪ್ರಣಬ್ ಮುಖರ್ಜಿ ನಿಧನರಾಗಿರುವುದರ ಬಗ್ಗೆ ಅವರ ಮಗ ಅಭಿಷೇಕ್ ಮುಖರ್ಜಿ ಮಾಹಿತಿ ನೀಡಿದ್ದಾರೆ. ಕಾಂಗ್ರೆಸ್ ಗೆ ಅವರ ಕೊಡುಗೆ ಅಪಾರವಾಗಿದ್ದು ಗಣ್ಯರು ಪ್ರಣಬ್ ಮುಖರ್ಜಿ ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ.