ಕೋಲಾರ : ಕನ್ನಡಿಗರ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ, ಕೋಲಾರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರು ಪ್ರತಿಭಟನೆ ನಡಸಿದರು. ಕೋಲಾರದ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಎಂಇಎಸ್ ಮತ್ತು ಶಿವಸೇನೆ ಸಂಘಟನೆಗಳ ವಿರುದ್ದ ಧಿಕ್ಕಾರಗಳನ್ನ ಕೂಗಿದ್ರು. ರಾಜ್ಯದಲ್ಲಿ ಎಂಇಎಸ್ ಮತ್ತು ಶಿವಸೇನೆ ಸಂಘಟನೆಗಳು ಕನ್ನಡಿಗರ ಮೇಲೆ ದಬ್ಬಾಳಿಕೆ ನಡೆಸುತ್ತಿದೆ. ಬೆಳಗಾವಿ ಸುವರ್ಣಸೌಧದ ಎದುರು 52 ಅಡಿಗಳ ಸಂಗೊಳ್ಳಿ ರಾಯಣ್ಣ ಪುತ್ಥಳಿ ನಿರ್ಮಾಣ ಮಾಡಬೇಕೆಂದು ಆಗ್ರಹಿಸಿದರು. ಕರ್ನಾಟಕದಲ್ಲಿ ಕನ್ನಡಿಗರು ಮತ್ತು ಮರಾಠಿಗರು ಅಣ್ಣ ತಮ್ಮಂದಿರಂತೆ ಇದ್ದೇವೆ. ಆದ್ರೆ, ಮಹಾರಾಷ್ಟ್ರದ ಕೆಲ ಪುಂಡರು ಬೆಳಗಾವಿ ವಿಚಾರವಾಗಿ ವಿನಾಕಾರಣ ಕನ್ನಡಿಗರು ಹಾಗೂ ಮರಾಠಿಗರ ಮಧ್ಯೆ ಬೆಂಕಿ ಇಡುತ್ತಿದ್ದಾರೆ ಅಂತಾ ಆಕ್ರೋಶ ವ್ಯಕ್ತಪಡಿಸಿದ್ರು. ಬೆಳಗಾವಿಯಲ್ಲಿ ಸೌಹಾರ್ದತೆ ಕೆಡಿಸುತ್ತಿರುವ ಎಂಇಎಸ್ ಹಾಗೂ ಶಿವಸೇನೆ ಸಂಘಟನೆಗಳನ್ನು ನಿಷೇಧಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಬೆಳಗಾವಿಯಲ್ಲಿ ಇಂತಹ ಘಟನೆಗಳು ಮರುಕಳುಹಿಸದಂತೆ ಸೂಕ್ತ ಕ್ರಮ ವಹಿಸಬೇಕೆಂದು ಒತ್ತಾಯಿಸಿ, ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಆರ್.ಶ್ರೀನಿವಾಸಮೂರ್ತಿ, ಪವರ್ ಟಿವಿ, ಕೋಲಾರ.