ದಕ್ಷಿಣ ಕನ್ನಡ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಬಂಧಿಸಿದ ಜಮೀನನ್ನು ಯಾವುದೇ ಖಾಸಗಿ ಸಂಸ್ಥೆ ಇಲ್ಲವೇ ವ್ಯಕ್ತಿಗಳಿಗೆ ಲೀಸ್ ಗೆ ಕೊಡುವುದಕ್ಕೆ ವಿರೋಧ ವ್ಯಕ್ತಪಡಿಸಿ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಿತರಕ್ಷಣಾ ವೇದಿಕೆ ಅಧ್ಯಕ್ಷರಾದ ಮಹೇಶ್ ಕುಮಾರ್ ಕರಿಕ್ಕಳ ಆಕ್ಷೇಪ ವ್ಯಕ್ತಪಡಿಸಿ ಮನವಿ ಸಲ್ಲಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಬರುವ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಬಂಧಿಸಿದ ಎಲ್ಲಾ ಜಮೀನುಗಳು ದೇವಸ್ಥಾನಕ್ಕೆ ಅವಶ್ಯಕತೆ ಇದೆ. ಸದ್ರಿ ದೇಗುಲದ ಜಮೀನುಗಳನ್ನು ಯಾವುದೇ ಖಾಸಗಿ ಸಂಸ್ಥೆಗಳು ಹಾಗೂ ವ್ಯಕ್ತಿಗಳಿಗೆ ಲೀಸಿಗೆ ನೀಡಿದ್ದಲ್ಲಿ ಅದು ದೇವಸ್ಥಾನದ ಹಿತಾಸಕ್ತಿಗೆ ಧಕ್ಕೆಯಾಗುತ್ತದೆ. ಇಂತಹ ಯಾವುದೇ ಪ್ರಸ್ತಾವನೆಗಳು ಇದ್ದಲ್ಲಿ ಕೂಡಲೇ ಅದನ್ನು ತಿರಸ್ಕರಿಸಬೇಕು ಎಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಿತರಕ್ಷಣಾ ವೇದಿಕೆ ವತಿಯಿಂದ ದೇವಳದ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಎಂ.ಎಚ್‌ಗೆ ಮನವಿ ಸಲ್ಲಿಸಲಾಗಿದೆ. ಈ ವೇಳೆ ಶ್ರೀನಾಥ್ ಭಟ್, ಪ್ರಶಾಂತ್ ಮಾಣಿಲ, ಗುರುಪ್ರಸಾದ್ ಉಪಸ್ಥಿತರಿದ್ದರು.
ಇರ್ಷಾದ್ ಕಿನ್ನಿಗೋಳಿ
ಪವರ್ ಟಿವಿ, ಮಂಗಳೂರು