ಬೆಂಗಳೂರು : ಸ್ಯಾಂಡಲ್ವುಡ್ನಲ್ಲಿ ಡ್ರಗ್ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ.
ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿಗೆ ಸಿಸಿಬಿ ನೋಟಿಸ್ ಜಾರಿ ಮಾಡಿದೆ. ಇಂದು ಅವರು ಸಿಸಿಬಿ ಕಚೇರಿಗೆ ಹಾಜರಾಗಿ ವಿಚಾರಣೆ ಎದುರಿಸಬೇಕಾಗಿದೆ. ರವಿಶಂಕರ್ ಎಂಬಾತನನ್ನು ಸಿಸಿಬಿ ಅಧಿಕಾರಿಗಳು ತನಿಖೆ ನಡೆಸಿದ್ದು, ಈ ವೇಳೆ ಆತ ರಾಗಿಣಿ ಹೆಸರು ಬಾಯ್ಬಿಟ್ಟಿರುವುದಾಗಿ ತಿಳಿದುಬಂದಿದೆ .