ಬೆಂಗಳೂರು: ದೇವನಹಳ್ಳಿಯಲ್ಲಿನ ಅಕ್ರಮ ಡಿನೋಟಿಫಿಕೇಷನ್ ಪ್ರಕರಣದ ಕುರಿತು ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಸಚಿವ ಮುರುಗೇಶ್ ನಿರಾಣಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಈ ಕುರಿತು ಇಂದು ಸುಪ್ರೀಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೊಬ್ಡೆ, ನ್ಯಾಯಮೂರ್ತಿಗಳಾದ ಎ.ಎಸ್. ಬೋಪಣ್ಣ ಮತ್ತು ವಿ. ರಾಮಸುಬ್ರಮಣಿಯಂ ಅವರನ್ನು ಒಳಗೊಂಡ ತ್ರಿಸದಸ್ಯ ನ್ಯಾಯಪೀಠವು ಯಡಿಯೂರಪ್ಪ ಮತ್ತು ಮುರುಗೇಶ್ ನಿರಾಣಿ ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳನ್ನು ವಿಚಾರಣೆಗೆ ಕೈತ್ತಿಕೊಳ್ಳಲಿದ್ದಾರೆ.
2010-11ರಲ್ಲಿ ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ವಸತಿ ಯೋಜನೆಗಾಗಿ 26 ಎಕರೆ ಭೂಮಿ ಮಂಜೂರು ಮಾಡಿ, ಬಳಿಕ ನಕಲಿ ದಾಖಲೆ ಹಾಗೂ ನಕಲಿ ಸಹಿ ಬಳಸಿ ಆ ಭೂಮಿಯನ್ನು ಅಂದಿನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ತಮ್ಮಿಂದ ವಾಪಸ್ ಪಡೆದಿದ್ದಾರೆ ಎಂದು ಉದ್ಯಮಿ ಎ. ಅಲಂ ಪಾಷಾ ಆರೋಪಿಸಿದ್ದರು. ಈ ಬಗ್ಗೆ ಅವರು ಲೋಕಾಯುಕ್ತಕ್ಕೆ ಖಾಸಗಿ ದೂರು ಸಲ್ಲಿಸಿದ್ದರು.