Wednesday, October 30, 2024

‘ರಾಜ್ಯದಲ್ಲಿ ಮುಂದಿನ ಎರಡು ವರ್ಷ ನಾನೇ ಸಿಎಂ’: ಬಿಎಸ್ ವೈ

ಹಾಸನ : ರಾಜ್ಯದಲ್ಲಿ ಮುಂದಿನ ಎರಡು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಹಾಸನದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಎರಡು ವರ್ಷ ಯಾವುದೇ ಬದಲಾವಣೆ ಇಲ್ಲ. ಬಿಎಸ್ ವೈ ನೇತೃತ್ವದಲ್ಲಿ ಒಳ್ಳೆ ಕೆಲಸವಾಗುತ್ತಿದೆ ಎಂದು ಅರುಣ್ ಸಿಂಗ್ ಹೇಳಿದ್ದಾರೆ ಇದರಿಂದ ನನ್ನ ಜವಾಬ್ದಾರಿ ಜಾಸ್ತಿಯಾಗಿದೆ. ಪ್ರಧಾನಿ, ಅಮಿತ್ ಶಾ ಇಟ್ಟಿರುವ ಪ್ರೀತಿ, ನಂಬಿಕೆ, ವಿಶ್ವಾಸ ಉಳಿಸಿಕೊಳ್ಳುವೆ. ಕೇಂದ್ರದ ನಾಯಕರು ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಅರುಣ್ ಸಿಂಗ್ ಹೇಳಿಕೆಯಿಂದ ನನಗೆ ನೂರರಷ್ಟು ಬಲ ಬಂದಿದೆ. ಯಡಿಯೂರಪ್ಪ ಅವರೇ ಮುಂದುವರೆಯುತ್ತಾರೆ ಎಂದಿದ್ದಾರೆ. ನಾನೇ ಸಿಎಂ ಆಗಿ ಅಭಿವೃದ್ಧಿಗೆ ಗಮನ ಕೊಡುವೆ ಎಂದಿದ್ದಾರೆ.

ರಾಜ್ಯಾದ್ಯಂತ ಪ್ರವಾಸ ಮಾಡಿ ಒಳ್ಳೆಯ ಕೆಲಸ ಮಾಡಲು ಪ್ರಯತ್ನಿಸುವೆ. ಪ್ರಾಮಾಣಿಕವಾಗಿ ಅಭಿವೃದ್ಧಿ ಪರ ಕೆಲಸ ಮಾಡುತ್ತೇನೆ ಎಂದು ಎಲ್ಲ ಗೊಂದಲಗಳಿಗೆ ಸಿಎಂ ಬಿಎಸ್ ಯಡಿಯೂರಪ್ಪ ತೆರೆಳೆದಿದ್ದಾರೆ. ಪರೋಕ್ಷವಾಗಿ ತಮ್ಮ ವಿರುದ್ಧ ಷಡ್ಯಂತ್ರ ಮಾಡುತ್ತಿರುವವರಿಗೆ ಬಿಎಸ್ ವೈ ಟಾಂಗ್ ಕೊಟ್ಟಿದ್ದಾರೆ.   

RELATED ARTICLES

Related Articles

TRENDING ARTICLES