Friday, November 22, 2024

ಸಿದ್ದರಾಮಯ್ಯ ಪರ್ಸಂಟೇಜ್ ಆರೋಪ : ಈಶ್ವರಪ್ಪ ತಿರುಗೇಟು

ಮೈಸೂರು :  ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪರ್ಸಟೇಂಜ್ ಕಿಂಗ್, ಪರ್ಸಂಟೇಜ್ ಸರ್ಕಾರ ಏನಿದ್ದರೂ ಕಾಂಗ್ರೆಸ್​ನದ್ದಾಗಿದೆ. ಆದ್ದರಿಂದ ಜನ ಅವರನ್ನ ಕಿತ್ತೊಗೆದ್ರು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ ಎಸ್ ಈಶ್ವರಪ್ಪಗೆ ಟಾಂಗ್ ನೀಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಎಲ್ಲಾ ಇಲಾಖೆಯ ಕಾಮಗಾರಿಯ ಗುತ್ತಿಗೆಗೆ 40 ಪರ್ಸೆಂಟ್ ಕಮಿಷನ್ ತೆಗೆದುಕೊಳ್ಳುತ್ತಿದ್ದಾರೆ, ಎಂಬ ಸಿದ್ದರಾಮಯ್ಯ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಮಿಷನ್ ವ್ಯವಹಾರದ ಒಟ್ಟು ಮೊತ್ತವೇ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತಿದ್ದೆ ಸಾಕ್ಷಿ ಎಂದರು. ಸಿದ್ದರಾಮಯ್ಯ ಎಷ್ಟು ಪರ್ಸೆಂಟ್ ತೆಗೆದುಕೊಳ್ಳುತ್ತಿದ್ದರು ಎಂದು ಜನರು ತೀರ್ಮಾನ ಮಾಡಿ ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಉರುಳಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಅಲ್ಲದೇ ಗುತ್ತಿಗೆದಾರರು ಪ್ರಧಾನಿಗೆ ಪತ್ರ ಬರೆದಿದ್ದಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಯಾವುದೇ ಇಲಾಖೆಯಲ್ಲಿ ಪರ್ಸೆಂಟೇಜ್ ವ್ಯವಹಾರ ನಡೆಯುತ್ತಿಲ್ಲ, ಯಾವುದೇ ಅಧಿಕಾರಿ ಅಥವಾ ಚುನಾಯಿತ ಪ್ರತಿನಿಧಿ ಕಮಿಷನ್ ಪಡೆದಿಲ್ಲ. ಅಂತಹ ಯಾವುದೇ ಆರೋಪ ಇದ್ದರೂ ಖುದ್ದು ದೂರು ಕೊಡಲಿ, ದೂರು ನೀಡಿದರೆ ತನಿಖೆ ಮಾಡಿಸುತ್ತೇವೆ. ಹಾಗು ಇಂತಹ ಇಲಾಖೆಯಲ್ಲಿ ಇಂತಹ ವ್ಯಕ್ತಿಗಳು ಮತ್ತು ಅಧಿಕಾರಿಗಳು, ಮಂತ್ರಿಗಳು ಇಷ್ಟು ಪರ್ಸೆಂಟೇಜ್ ತೆಗೆದುಕೊಂಡಿದ್ದಾರೆಂದು ಸಾಬೀತು ಪಡಿಸಿದರೆ ಸಂಬಂಧಪಟ್ಟ ಇಲಾಖೆಯಿಂದ ಖಂಡಿತ ತನಿಖೆ ಮಾಡುಸುತ್ತೇವೆ ಎಂದು ಸುದ್ದಿಗೋಷ್ಠಿಯಲ್ಲಿ ಕೆ ಎಸ್ ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.

ಹಾಗೂ ಈ ಬಾರಿ ಪರಿಷತ್ ಚುನಾವಣೆಯಲ್ಲಿ ಬಿಜೆಪಿ 15 ರಿಂದ 16 ಸ್ಥಾನ ಗೆಲ್ಲಲಿದೆ. ಈ ಮೂಲಕ ವಿಧಾನ ಪರಿಷತ್ ನಲ್ಲೂ ಬಿಜೆಪಿ ಬಹುಮತ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

RELATED ARTICLES

Related Articles

TRENDING ARTICLES