ಮಧ್ಯಪ್ರದೇಶದಲ್ಲಿ ಮತ ಎಣಿಕೆ ಮುಕ್ತಾಯವಾಗಿದೆ. 24ಗಂಟೆಗಳ ಕಾಲ ಮತ ಎಣಿಕೆ ನಡೆದಿದ್ದು, ಅತಂತ್ರ ವಿಧಾನಸಭೆ ನಿರ್ಮಾಣವಾಗಿದೆ. ಸರ್ಕಾರ ರಚನೆಗಾಗಿ ಬಿಜೆಪಿ ಕಾಂಗ್ರೆಸ್- ಕಸರತ್ತು ನಡೆಸುತ್ತಿದೆ. ಸರ್ಕಾರ ರಚನೆಗೆ 116 ಸ್ಥಾನಗಳು ಬೇಕಾಗಿದ್ದು, ಕಾಂಗ್ರೆಸ್ 114, ಬಿಜೆಪಿ 109, ಇತರೆ 7 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಕಾಂಗ್ರೆಸ್ಗೆ ಬಹುಮತಕ್ಕೆ ಇನ್ನೂ 2 ಸ್ಥಾನಗಳ ಅವಶ್ಯಕತೆ ಇದೆ.