Friday, November 22, 2024

ದೇಶದಲ್ಲಿ 213 ಒಮೈಕ್ರಾನ್​​​ ಕೇಸ್​​​

ಡೆಲ್ಟಾಗಿಂತ ಒಮೈಕ್ರಾನ್ ಮೂರು ಪಟ್ಟು ಹೆಚ್ಚು ವೇಗವಾಗಿ ಹರಡುತ್ತದೆ ಎಂದು ಈಗಾಗಲೇ ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಎಚ್ಚರಿಕೆ ನೀಡಿದೆ. ಈ ಮಧ್ಯೆ ಸಚಿವಾಲಯ ಇಂದು ನೀಡಿರುವ ಅಂಕಿ ಅಂಶದಂತೆ ದೇಶದಲ್ಲಿ ಇದುವರೆಗೆ 213 ಒಮೈಕ್ರಾನ್ ಕೇಸುಗಳು ವರದಿಯಾಗಿವೆ. ನಿನ್ನೆಯವರೆಗೆ 200 ಪ್ರಕರಣಗಳಿದ್ದವು.

ಒಂದೇ ದಿನದಲ್ಲಿ 13 ಕೇಸುಗಳು ಹೆಚ್ಚಾಗಿವೆ. ಒಮೈಕ್ರಾನ್​ನಿಂದ ಬಾಧಿತರಾಗುವ ಜನಸಂಖ್ಯೆಯ ಬಗ್ಗೆ ಡೇಟಾವನ್ನು ಸಂಗ್ರಹಿಸುವುದಕ್ಕಾಗಿ ಕೋವಿಡ್-19 ವಾರ್ ರೂಮ್ ಗಳನ್ನು ಪುನಾರಂಭಗೊಳಿಸಲು ರಾಜ್ಯಗಳಿಗೆ ಆರೋಗ್ಯ ಸಚಿವಾಲಯ ಸೂಚನೆ ನೀಡಿದೆ. ಭಾರತ ಸೇರಿದಂತೆ ಜಗತ್ತಿನಾದ್ಯಂತ ಒಮೈಕ್ರಾನ್ ಸೋಂಕಿನ ಭೀತಿ ಹೆಚ್ಚಾಗುತ್ತಿದೆ.

ಒಟ್ಟು 213 ಒಮೈಕ್ರಾನ್ ಪ್ರಕರಣಗಳಲ್ಲಿ ದೆಹಲಿ ಮತ್ತು ಮಹಾರಾಷ್ಟ್ರದಲ್ಲಿ ಕ್ರಮವಾಗಿ 57 ಮತ್ತು 54 ಪ್ರಕರಣಗಳು ವರದಿಯಾಗಿವೆ. ಕರ್ನಾಟಕದಲ್ಲಿ 15 ಕೇಸುಗಳು ವರದಿಯಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, ಇಲ್ಲಿಯವರೆಗೆ 90 ರೋಗಿಗಳು ಓಮಿಕ್ರಾನ್ ಸೋಂಕಿನಿಂದ ಗುಣಮುಖರಾಗಿದ್ದಾರೆ.

RELATED ARTICLES

Related Articles

TRENDING ARTICLES