ವಿಶ್ವದಾದ್ಯಂತ ಸಂಭ್ರಮದ ಕ್ರಿಸ್’ಮಸ್ ಹಬ್ಬವನ್ನು ಆಚರಣೆ ಮಾಡಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.
Christmas greetings to everyone! We recall the life and noble teachings of Jesus Christ, which placed topmost emphasis on service, kindness and humility. May everyone be healthy and prosperous. May there be harmony all around.
— Narendra Modi (@narendramodi) December 25, 2021
ಸಾಮಾಜಿಕ ಜಾಲತಾಣ ಟ್ವಿಟ್ಟರ್ನಲ್ಲಿ ಟ್ವೀಟ್ ಮಾಡಿ ದೇಶದ ಜನತೆಗೆ ಶುಭಾಶಯಗಳನ್ನು ಕೋರಿರುವ ಪ್ರಧಾನಿ ಮೋದಿಯವರು, ಎಲ್ಲರಿಗೂ ಕ್ರಿಸ್ಮಸ್ ಶುಭಾಶಯಗಳು! ಎಲ್ಲರೂ ಆರೋಗ್ಯವಂತರಾಗಿ ಮತ್ತು ಸಮೃದ್ಧಿಯನ್ನು ಹೊಂದಲಿ. ಎಲ್ಲೆಡೆ ಸಾಮರಸ್ಯವಿರಲಿ ಎಂದು ಹೇಳಿದ್ದಾರೆ.
Merry Christmas to fellow citizens, especially to our Christian brothers and sisters, in India and abroad. On this joyous occasion, let us resolve to build a society that is based on the values of justice & liberty and adopt the teachings of Jesus Christ in our lives.
— President of India (@rashtrapatibhvn) December 25, 2021
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಟ್ವೀಟ್ ಮಾಡಿ, ಈ ಸಂತೋಷದಾಯಕ ಸಂದರ್ಭದಲ್ಲಿ, ನ್ಯಾಯ ಮತ್ತು ಸ್ವಾತಂತ್ರ್ಯದ ಮೌಲ್ಯಗಳನ್ನು ಆಧರಿಸಿದ ಸಮಾಜವನ್ನು ನಿರ್ಮಿಸಲು ಮತ್ತು ನಮ್ಮ ಜೀವನದಲ್ಲಿ ಯೇಸುಕ್ರಿಸ್ತನ ಬೋಧನೆಗಳನ್ನು ಅಳವಡಿಸಿಕೊಳ್ಳಲು ನಾವು ಸಂಕಲ್ಪ ಮಾಡೋಣ ಎಂದು ತಿಳಿಸಿದ್ದಾರೆ.