Monday, May 20, 2024

ಬೆಂಕಿ ತಗುಲಿ ಬಸ್​​​ ಭಸ್ಮ

ಚಿಕ್ಕಮಗಳೂರು : ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆಗೆ ಬಸ್ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪೆಟ್ರೋಲ್ ಬಂಕ್ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ದುರಂತ ತಪ್ಪಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಗ್ರಾಮದಲ್ಲಿರುವ ಪೆಟ್ರೋಲ್ ಬಂಕ್‌ನಲ್ಲಿ ಈ ಘಟನೆ ನಡೆದಿದೆ. ಬಸ್ಸಲ್ಲಿ ಬೆಂಕಿ ಕಾಣಿಸಿಕೊಂಡಾಗ ಕೂಡಲೇ ಪೆಟ್ರೋಲ್ ಬಂಕ್ ನೌಕರ ಎಚ್ಚೆತ್ತುಕೊಂಡಿದ್ದಾರೆ. ಪೆಟ್ರೋಲ್ ಬಂಕ್​ನಲ್ಲಿ ಸಾವಿರಾರು ಲೀಟರ್ ಪೆಟ್ರೋಲ್ ಡೀಸೆಲ್ ಇತ್ತು. ಆ ನೌಕರನ ಸಮಯ ಪ್ರಜ್ಞೆಯಿಂದ ದೊಡ್ಡ ದುರಂತ ತಪ್ಪಿದೆ ಎಂದು ತಿಳಿದುಬಂದಿದೆ.

RELATED ARTICLES

Related Articles

TRENDING ARTICLES