Friday, November 22, 2024

ಕೋವಿಡ್-19 ಪ್ರಕರಣಗಳು ಏರಿಕೆಯಾಗಿದೆ, ಆದ್ರೆ ಆತಂಕ ಪಡಬೇಡಿ: ಅರವಿಂದ್ ಕೇಜ್ರಿವಾಲ್

ರಾಜಧಾನಿ ದೆಹಲಿಯಲ್ಲಿ ಕೋವಿಡ್-19 ಪ್ರಕರಣಗಳು ಏರಿಕೆಯಾಗಿದೆ. ಆದರೆ ಯಾರು ಆತಂಕ ಪಡಬೇಡಿ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಕಡಿಮೆಯೇ ಇದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಮಹಾರಾಷ್ಟ್ರದ ಬಳಿಕ ಅತೀ ಹೆಚ್ಚು ಓಮಿಕ್ರಾನ್ ಪ್ರಕರಣಗಳನ್ನು ಹೊಂದಿರುವ ರಾಜ್ಯಗಳಲ್ಲಿ ದೆಹಲಿ ಎರಡನೇ ಸ್ಥಾನದಲ್ಲಿದೆ. ಸದ್ಯ ಈ ಕುರಿತಂತೆ ಸುದ್ದಿಗೋಷ್ಟಿ ನಡೆಸಿದ ಅರವಿಂದ್ ಕೇಜ್ರಿವಾಲ್ ಅವರು, ದೆಹಲಿಯಲ್ಲಿ ಕೋವಿಡ್-19 ಪ್ರಕರಣಗಳು ವೇಗವಾಗಿ ಹೆಚ್ಚುತ್ತಿದೆ. ಆದರೆ ಯಾರೂ ಭಯಪಡುವ ಅಗತ್ಯವಿಲ್ಲ.

ಪ್ರಸ್ತುತ, ನಗರದಲ್ಲಿ 6,360 ಸಕ್ರಿಯ ಪ್ರಕರಣಗಳಿದ್ದು, 3,100 ಹೊಸ ಪ್ರಕರಣಗಳನ್ನು ವರದಿಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. ನೆನ್ನೆ 246 ಆಸ್ಪತ್ರೆಯಲ್ಲಿ ಬೆಡ್​ಗಳು ಭರ್ತಿಯಾಗಿದೆ ಮತ್ತು ಸೋಂಕಿತರೆಲ್ಲರೆಲ್ಲರೂ ಯಾವುದೇ ರೋಗ ಗುಣಲಕ್ಷಣಗಳ ಕಂಡು ಬಂದಿಲ್ಲ. ಕೊರೊನಾ ಎರಡನೇ ಅಲೆಗೆ ಹೋಲಿಸಿದರೆ ಈಗ ಪ್ರಕರಣಗಳ ಸಂಖ್ಯೆ ಕಡಿಮೆ ಇದೆ ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES