Thursday, December 19, 2024

ನಾಳೆಯಿಂದ 3ನೇ ಡೋಸ್​ ಲಸಿಕೆ ಅಭಿಯಾನ

ದೇಶ : ಭಾರತದಲ್ಲಿ ನಾಳೆಯಿಂದ ಮೂರನೇ ಡೋಸ್​ ಲಸಿಕೆ ಅಭಿಯಾನ ನಡೆಯಲಿದೆ. ಸದ್ಯ ಕೊವಿಡ್​ -19 ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿ ಇರುವವರು ಮತ್ತು 60 ವರ್ಷ ಮೇಲ್ಪಟ್ಟು ಇನ್ನಿತರ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಕೊವಿಡ್​ 19 ಲಸಿಕೆ ಬೂಸ್ಟರ್​ ಡೋಸ್​ಗಳನ್ನು ನೀಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ.

18 ವರ್ಷ ಮೇಲ್ಪಟ್ಟವರಿಗೆ ಕಳೆದ ವರ್ಷ ಜನವರಿಯಿಂದಲೇ ಕೊರೋನಾ ಲಸಿಕೆ ನೀಡಲಾಗುತ್ತಿತ್ತು. ಒಟ್ಟಾರೆ ಸದ್ಯ ದೇಶದಲ್ಲಿ 150 ಕೋಟಿಗೂ ಅಧಿಕ ಡೋಸ್ ನೀಡಲಾಗಿದ್ದು, ಜನವರಿ 3ರಿಂದ 15-18 ವರ್ಷದವರಿಗೆ ಕೊರೋನಾ ಲಸಿಕೆ ನೀಡಲಾಗುತ್ತಿದೆ. ಆರಂಭವಾದ ಒಂದೇ ವಾರದಲ್ಲಿ ಈ ವಯಸ್ಸಿನ 2 ಕೋಟಿಗೂ ಹೆಚ್ಚಿನ ಜನರು ಕೊರೊನಾ ಲಸಿಕೆ ಪಡೆದಿದ್ದಾರೆ.

RELATED ARTICLES

Related Articles

TRENDING ARTICLES