ಬಳ್ಳಾರಿ : ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಆತಂಕವೂ ಹೆಚ್ಚಾಗುತ್ತಿದೆ. ಹರಿಯಾಣದಿಂದ ಬಳ್ಳಾರಿಗೆ ನೂರಾರು ವಿದ್ಯಾರ್ಥಿಗಳ ಆಗಮಿಸಿದ್ದು, ಕೊವಿಡ್ ನೆಗೆಟಿವ್ ರಿಪೋರ್ಟ್ ಇಲ್ಲದೆ ಬಂದಿದ್ದಾರೆ.
ಹೊರ ರಾಜ್ಯದ ವಿದ್ಯಾರ್ಥಿಗಳಿಂದ ಜಿಲ್ಲೆಯಲ್ಲಿ ಕೊರೋನಾ ಆತಂಕ ಎದುರಾಗಿದ್ದು. ಹರಿಯಾಣ ಮೂಲದ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬಳ್ಳಾರಿಗೆ ಆಗಮಿಸಿದ್ದಾರೆ. ಇವರಿಂದ ಜಿಲ್ಲೆಯಲ್ಲಿ ಕೊರೋನಾ ಸ್ಫೋಟಗೊಳ್ಳುವ ಭೀತಿ ಎದುರಾಗಿದೆ.
RT-PCR ವರದಿ ಇಲ್ಲದೆ ಹರಿಯಾಣದಿಂದ ಸುಮಾರು 100 ನರ್ಸಿಂಗ್ ವಿದ್ಯಾರ್ಥಿಗಳು ಬಳ್ಳಾರಿಗೆ ಬಂದಿದ್ದು, ಬಳ್ಳಾರಿಯ ರಾಯಲ್ ಸರ್ಕಲ್ ಬಳಿ ಪೊಲೀಸರು ಕೊವಿಡ್ ರಿಪೋರ್ಟ್ ಕೇಳಿದ್ದಕ್ಕೆ ವಿದ್ಯಾರ್ಥಿಗಳು ತಬ್ಬಿಬ್ಬಾಗಿದ್ದಾರೆ..ರಿಪೋರ್ಟ್ ಕೇಳಿದ್ರೆ ವ್ಯಾಕ್ಸಿನೇಷನ್ ಸರ್ಟಿಫಿಕೇಟ್ ತೋರಿಸಿದ್ದು, ಜಿಲ್ಲಾಡಳಿತಕ್ಕೆ ಯಾವುದೇ ಮಾಹಿತಿ ನೀಡದೇ ಇರೋದ್ರಿಂದ ಈ ವಿದ್ಯಾರ್ಥಿಗಳಿಂದ ನಗರದಲ್ಲಿ ಕೊರೋನಾತಂಕ ಮತ್ತಷ್ಟು ಹೆಚ್ಚಾಗಿದೆ.