Saturday, November 23, 2024

ಪೀಠ ಸ್ಥಾಪನೆ ವಿಚಾರ; ಸ್ವಾಮೀಜಿಗಳ ವಾರ್!

ಬಾಗಲಕೋಟೆ/ಜಮಖಂಡಿ: ವೀರಶೈವ ಲಿಂಗಾಯತ ಪಂಚಮಸಾಲಿ ಮೂರನೇ ಪೀಠ ಸ್ಥಾಪನೆ ವಿಚಾರ ಈಗ ಬಹುಚರ್ಚೆಗೆ ಕಾರಣವಾಗಿದೆ. ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದ ಜಯಮೃತ್ಯುಂಜಯ ಸ್ವಾಮೀಜಿ ತೀವ್ರ ವಿರೋಧ ವ್ಯಕ್ತಪಡಿಸಿದ್ದರೆ. ಹರಿಹರ ವೀರಶೈವ ಪಂಚಮಸಾಲಿ ಪೀಠಾಧಿಪತಿ ವಚನಾನಂದ ಶ್ರೀಗಳು ಪೀಠ ಸ್ಥಾಪನೆಗೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂಬ ಘೋಷಣೆ ಮಾಡಿರುವುದು ತೀವ್ರ ಕುತೂಹಲ ಕೆರಳಿಸಿದೆ.

ಹರಿಹರದ ಪಂಚಮಸಾಲಿ ಮಠದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಜಿಲ್ಲೆಗೊಂದರಂತೆ ಪೀಠ ಸ್ಥಾಪನೆಯಾಗಲಿ. ಅದಕ್ಕೇನೂ ನಮ್ಮ ಅಭ್ಯಂತರವಿಲ್ಲ. ಹರಿಹರ ಪಂಚಮಸಾಲಿ ಪೀಠವೇ ಪಂಚಮಸಾಲಿಗಳ ಮೂಲಕ್ಷೇತ್ರ. ಇದನ್ನು ಎಲ್ಲರೂ ಒಪ್ಪಿಕೊಂಡಿದ್ದಾರೆ. ಮಾತ್ರವಲ್ಲ, ಈ ಪೀಠಕ್ಕೆ ತನ್ನದೇ ಆದ ವಿಶಿಷ್ಟ ಮಾನ್ಯತೆ, ಗೌರವ, ಇತಿಹಾಸವಿದೆ ಎಂದರು.

ಇನ್ನು ಜಮಖಂಡಿಯಲ್ಲಿ ಪೀಠ ಸ್ಥಾಪನೆಗೆ ವಿರೋಧ ವ್ಯಕ್ತಪಡಿಸಿರುವ ಜಯಮೃತ್ಯುಂಜಯ ಸ್ವಾಮೀಜಿ ಹೆಸರನ್ನು ಎಲ್ಲಿಯೂ ಉಲ್ಲೇಖಿಸದ ವಚನಾನಂದ ಶ್ರೀಗಳು ಪೀಠ ಸ್ಥಾಪನೆಗೆ ಸಂಪೂರ್ಣವಾಗಿ ಬೆಂಬಲ ಇದೆ ಎಂಬ ಮಾತು ಹೇಳಿರುವುದು ಈಗ ಚರ್ಚೆಗೆ ಕಾರಣವಾಗಿದೆ.

RELATED ARTICLES

Related Articles

TRENDING ARTICLES