Friday, November 1, 2024

ಸಿದ್ದರಾಮಯ್ಯಗೆ ನಾನು ಹೊಸ ರಾಜಕೀಯ ಜೀವನ ಕೊಟ್ಟೆ – ಸಿ.ಎಂ. ಇಬ್ರಾಹಿಂ

ಬೆಂಗಳೂರು: ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಬಿ.ಕೆ ಹರಿಪ್ರಸಾದ್​ ಆಯ್ಕೆ ಬೆನ್ನೆಲ್ಲೇ ಕಾಂಗ್ರೆಸ್​ ಎಂಎಲ್​ಸಿ ಸಿ.ಎಂ. ಇಬ್ರಾಹಿಂ ಅವರು ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಇಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗಾಗಿ ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡ ಅವರನ್ನು ಬಿಟ್ಟಿದ್ದೆ. ಜೈಲಿನಲ್ಲಿದ್ದು ಕಟ್ಟಿದ್ದ ಪಕ್ಷ ಜೆಡಿಎಸ್ ಬಿಟ್ಟಿದ್ದೆ. ಒಂದೇ ಬಾರಿಗೆ ಎಲ್ಲ ವಿಚಾರಗಳನ್ನು ಹೇಳುವುದಿಲ್ಲ. ಕಂತು ಕಂತಾಗಿ ಎಲ್ಲಾ ವಿಚಾರಗಳನ್ನು ಹೇಳುತ್ತೇನೆ.್ಟಿ ಶೀಘ್ರದಲ್ಲೇ ನನ್ನ ನಿರ್ಧಾರವನ್ನು ತಿಳಿಸುತ್ತೇನೆ. ಸಿದ್ದರಾಮಯ್ಯ ಅವರಿಗೆ ಹೊಸ ರಾಜಕೀಯ ಜೀವನ ಕೊಟ್ಟೆವು. ಅದಕ್ಕೀಗ ಅವರು ನಮಗೆ ಹೊಸ ಉಡುಗೊರೆ ನೀಡಿದ್ದಾರೆ ಎಂದು ಸಿಎಲ್​ಪಿ ಲೀಡರ್​ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲುತ್ತಿದ್ದರು. ಇದು ತಿಳಿದು ಬದಾಮಿ ಕ್ಷೇತ್ರದಲ್ಲಿ ನಾಮಪತ್ರ ಹಾಕಿಸಿದ್ದೆ. ಆ ಕ್ಷೇತ್ರದಲ್ಲಿ ಅವರು ಗೆದ್ದು ಶಾಸಕರು ಕೂಡ ಆದರು. ಅವರಿಗೆ ನಾನು ಹೊಸ ರಾಜಕೀಯ ಜೀವನ ಕೊಟ್ಟೆ ಎಂದು ಹೇಳಿಕೊಂಡಿದ್ದಾರೆ.

ಸದ್ಯ ವಿಧಾನ ಪರಿಷತ್ ಸ್ಥಾನಕ್ಕೆ ಶೀಘ್ರದಲ್ಲೇ ರಾಜೀನಾಮೆ ನೀಡುತ್ತೇನೆ. ಈ ವಿಷಯವಾಗಿ ದೇವೇಗೌಡರನ್ನು ಕೇಳಿ ಮುಂದೆ ತೀರ್ಮಾನ ಮಾಡುತ್ತೇನೆ. ಈ ವಿಚಾರದಲ್ಲಿ ನನಗೆ ಸ್ಥಾನ ತಪ್ಪಿಸಿದ ಬಗ್ಗೆ ಸಿದ್ದರಾಮಯ್ಯ ಉತ್ತರಿಸಬೇಕು. ಡಿ.ಕೆ ಶಿವಕುಮಾರ್‌ ಅವರಿಗೂ, ನಮಗೂ ಹೊಂದಾಣಿಕೆ ಆಗಲ್ಲ ಎಂದು ಸಿ.ಎಂ ಇಬ್ರಾಹಿಂ ಅವರು ಮಾತನಾಡಿದರು.

RELATED ARTICLES

Related Articles

TRENDING ARTICLES