ಬೆಂಗಳೂರು : ರಾಜ್ಯದ ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ಸಂಘರ್ಷ ಭುಗಿಲೆದ್ದಿದೆ. ಸದ್ಯ ಇಡೀ ರಾಜ್ಯ ಕೋರ್ಟ್ ತೀರ್ಮಾನಕ್ಕಾಗಿ ಕಾಯುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹೊರಗಡೆಯವರು ಪ್ರಚೋದನೆ ನೀಡುತ್ತಿದ್ದಾರೆ.
ಯಾರೂ ಪ್ರಚೋದನೆ ನೀಡದೆ ಶಾಂತಿಯಿಂದ ವರ್ತಿಸೋಣ. ಪ್ರಕರಣ ಕೋರ್ಟ್ನಲ್ಲಿರುವುದರಿಂದ ಎಲ್ಲರೂ ತೀರ್ಪು ಬರುವವರೆಗೂ ಕಾಯೋಣ. ಈ ವಿಷಯದಲ್ಲಿ ಈಗಾಗಲೇ ಹಲವರು ಹೇಳಿಕೆ ಕೊಟ್ಟಿದ್ದಾರೆ. ಇನ್ಮುಂದೆ ಯಾರೂ ಹೇಳಿಕೆ ಕೊಡಬೇಡಿ ಎಂದು ಮನವಿ ಮಾಡಿದ್ದಾರೆ.
ಹಿಜಾಬ್ ಬಗ್ಗೆ ಇಂದು ಸಂಜೆ ಶಿಕ್ಷಣ ಸಚಿವರು, ಅಧಿಕಾರಿಗಳ ಜೊತೆ ಸಭೆ ಮಾಡುತ್ತೇನೆ. ಈ ಬೆಳವಣಿಗೆಗಳ ಬಗ್ಗೆ ಗೃಹ ಸಚಿವರ ಜತೆಯೂ ಮಾತುಕತೆ ನಡೆಸುತ್ತೇನೆ. ಮೊದಲಿನಂತೆ ಸೌಹಾರ್ದತೆ, ಶಿಸ್ತು ಮೂಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ ಸಿಎಂ ಬೊಮ್ಮಾಯಿ, ರಜೆ ಮುಂದುವರಿಕೆ ಬಗ್ಗೆ ಸಂಜೆ ನಿರ್ಧಾರ ಮಾಡುತ್ತೇವೆ. ಮಕ್ಕಳ ವಿಚಾರದಲ್ಲಿ ನಾವು ಸಂವೇದನಾಶೀಲರಾಗಿರಬೇಕು ಅಂತ ಅಭಿಪ್ರಾಯಪಟ್ಟರು.