ಉತ್ತರಪ್ರದೇಶ: ಹಿಜಾಬ್ ವಿವಾದಕ್ಕೆ ಸಂಬಂಧಪಟ್ಟಂತೆ ದಿನಕ್ಕೊಬ್ಬರು ನಾಯಕರು ದೇಶದಲ್ಲಿ ವಿಭಿನ್ನ ಹೇಳಿಕೆಯನ್ನು ಕೊಡುತ್ತಿದ್ದಾರೆ. ಅದರಲ್ಲಿ ಸಮಾಜವಾದಿ ಪಕ್ಷವೂ ಹಿಂದೆ ಬಿದ್ದಿಲ್ಲ. ಯಾರಾದರೂ ಹಿಜಾಬ್ ಮುಟ್ಟಲು ಬಂದರೆ ಅವರ ಕೈಯನ್ನ ಕತ್ತರಿಸುವುದಾಗಿ ಉತ್ತರಪ್ರದೇಶದ ಸಮಾಜವಾದಿ ಪಕ್ಷದ ನಾಯಕಿ ರುಬೀನಾ ಬೇಗಂ ಎಚ್ಚರಿಸಿದ್ದಾರೆ.
ಕರ್ನಾಟಕದ ಕಾಲೇಜುಗಳಲ್ಲಿ ಹಿಜಾಬ್‌ಗೆ ಅನುಮತಿ ನಿರಾಕರಿಸಿದ್ದನ್ನು ವಿರೊಧಿಸಿ ಅಲಿಗಢ ಮುಸ್ಲಿಂ ವಿವಿಯಲ್ಲಿ ಆಯೋಜಿಸಿದ್ದ ಪ್ರತಿಭಟನೆ ವೇಳೆ ಮಾತನಾಡಿದ ಅವರು ‘ಹೆಣ್ಣುಮಕ್ಕಳ ಘನತೆಯೊಂದಿಗೆ ಆಟವಾಡಲು ಬಂದರೆ ಅವರು ಝಾನ್ಸಿ ರಾಣಿ, ರಜಿಯಾ ಸುಲ್ತಾನ್‌ರಂತೆ, ಹಿಜಾಬ್ ಮುಟ್ಟಲು ಬಂದ ಕೈಗಳನ್ನು ಕತ್ತರಿಸಲು ಸಮಯ ತೆಗೆದುಕೊಳ್ಳುವುದಿಲ್ಲ. ಯಾವುದೇ ಸರ್ಕಾರ ಅಧಿಕಾರದಲ್ಲಿರಲಿ ಮಹಿಳೆಯರನ್ನು ದುರ್ಬಲರು ಎಂದು ಭಾವಿಸಬಾರದು’ ಎಂದು ಗುಡುಗಿದ್ದಾರೆ.