Monday, November 25, 2024

ಸದನ ಗಲಾಟೆ ಪ್ರಜಾಪ್ರಭುತ್ವಕ್ಕೆ ಶೋಭೆಯಲ್ಲ : ಹೆಚ್​.ಡಿ.ಕುಮಾರಸ್ವಾಮಿ

ವಿಧಾನಸಭೆಯಲ್ಲಿಂದು ನಡೆದ ಬೆಳೆವಣಿಗೆಗಳು ಪ್ರಜಾಪ್ರಭುತ್ವವನ್ನೇ ಅಣಕಿಸುವಂತೆ ಇದ್ದು, 2023ರ ಚುನಾವಣೆಯಲ್ಲಿ ಏನೆಲ್ಲಾ ನಡೆಯುತ್ತದೆ ಎಂಬುದರ ಟ್ರೈಲರ್ ತೋರಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಳವಳ ವ್ಯಕ್ತಪಡಿಸಿದರು.

ಸದನದಲ್ಲಿ ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ನಡುವೆ ನಡೆದ ಘರ್ಷಣೆ ಹಾಗೂ ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ವರ್ತನೆಯ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, “ಇವತ್ತು ಸದನದಲ್ಲಿ ನಡೆದ ಘಟನೆಗಳು ಪ್ರಜಾಪ್ರಭುತ್ವಕ್ಕೆ ಶೋಭೆಯಲ್ಲ. ರಾಷ್ಟ್ರೀಯ ಪಕ್ಷಗಳು ತಮ್ಮ ಹಿತಕ್ಕಾಗಿ ಕನ್ನಡಿಗರ ತೆರಿಗೆ ಹಣವನ್ನು ಪೋಲು ಮಾಡುತ್ತಿವೆ” ಎಂದು ಆರೋಪಿಸಿದರು.

ಇವತ್ತು ಸದನದಲ್ಲಿ ನಡೆದ ಘಟನೆಗಳು ಪ್ರಜಾಪ್ರಭುತ್ವಕ್ಕೆ ಶೋಭೆಯಲ್ಲ. ರಾಷ್ಟ್ರೀಯ ಪಕ್ಷಗಳು ತಮ್ಮ ಹಿತಕ್ಕಾಗಿ ಕನ್ನಡಿಗರ ತೆರಿಗೆ ಹಣವನ್ನು ಪೋಲು ಮಾಡುತ್ತಿವೆ. ಕಾಂಗ್ರೆಸ್ ನಾಯಕರ ವರ್ತನೆಯನ್ನು ಗಮನಿಸಿದೆ. ಅವರಲ್ಲಿ ಕೆಲವರು ತೊಡೆ ತಟ್ಟಿಕೊಂಡು ಗೂಳಿಗಳ ರೀತಿಯಲ್ಲಿ ನುಗ್ಗುತ್ತಿದ್ದರು. ರಾಷ್ಟ್ರಿಯ ಪಕ್ಷದ ಅಧ್ಯಕ್ಷರು, ಎರಡೂ ಪಕ್ಷಗಳ ನಾಯಕರ ಪರಸ್ಪರ ಪದಬಳಕೆ ದೇವರಿಗೆ ಪ್ರೀತಿ. ಪವಿತ್ರವಾದ ಈ ಸದನದ ಸಮಯವನ್ನು ಹಾಳು ಮಾಡಿದರು. ಸಂಸದೀಯ ವ್ಯವಸ್ಥೆಗೆ ಕಳಂಕ ತರುವ ಕೆಲಸ ಇದು ಎಂದು ಬೇಸರ ವ್ಯಕ್ತ ಪಡಿಸಿದರು.

RELATED ARTICLES

Related Articles

TRENDING ARTICLES