ಬೆಂಗಳೂರು: ಬಿಜೆಪಿ ಅವರಿಗೆ ಆಡಳಿತ ನಡೆಸಲು ಬರುವುದಿಲ್ಲ. ಇದರಿಂದಲೇ ರಾಜ್ಯದಲ್ಲಿ ಇಂತಹ ಘಟನೆಗಳು ನಡೆಯುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಕಿಡಿಕಾರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆ ಪ್ರಕರಣದಲ್ಲಿ ಗುಪ್ತಚರ ಇಲಾಖೆ ಏನು ಮಾಡುತ್ತಿದೆ. ಗುಪ್ತಚರ ಇಲಾಖೆ ಸತ್ತೋಗಿದಿಯಾ?, ಗೃಹ ಸಚಿವರ ಜಿಲ್ಲೆಯಲ್ಲೆ ಇಂತಹ ಘಟನೆ ನಡೆದಿದೆ. ಈ ಘಟನೆಯನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ ಎಂದು ವಾಗ್ದಾಳಿ ನಡೆಸಿದರು.
ಕಾನೂನು ಸುವ್ಯವಸ್ಥೆ ನಿರ್ವಹಣೆ ಮಾಡುವುದು ಸರ್ಕಾರದ ಕೆಲಸವಾಗಿದೆ. ಆದರೆ ಕೊಲೆಯಾದ ಹರ್ಷನ ಜೀವಕ್ಕೆ ಅಪಾಯ ಇತ್ತು ಎಂದು ಅವರ ತಂದೆಯೆ ಹೇಳಿದ್ದಾರೆ. ಇದು ಗೊತ್ತಿದ್ದರು ಪೊಲೀಸ್ ಇಲಾಖೆ ಏನು ಮಾಡುತ್ತಿತ್ತು. ಕಾನೂನು ಸುವ್ಯವಸ್ಥಿತ ನಿರ್ವಹಣೆ ಮಾಡಲು ಸಾಧ್ಯವಾಗದೆ ಕಾಂಗ್ರೆಸ್ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಗುಡುಗಿದರು.