ನವದೆಹಲಿ : ಕರ್ನಾಟಕದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಕಾಂಗ್ರೆಸ್ ಪಕ್ಷ ಕ್ಲರ್ಕ್ ರೀತಿ ಟ್ರೀಟ್ ಮಾಡ್ತಿದೆ ಅಂತ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ರಾಮ್ ಲೀಲಾ ಮೈದಾನದಲ್ಲಿ ನಡೆದ ಬಿಜೆಪಿ ಸಮಾವೇಶದ ಎರಡನೆ ಹಾಗೂ ಕೊನೆಯ ದಿನವಾದ ಶನಿವಾರ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ”ತೆಲಂಗಾಣದಲ್ಲಿ ಟಿಡಿಪಿಯೊಂದಿಗೆ ಮಾಡಿಕೊಂಡಿದ್ದ ಕಾಂಗ್ರೆಸ್ ಮೈತ್ರಿ ವಿಫಲವಾಯ್ತು. ಕರ್ನಾಟಕದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವಿದೆ. ಅಲ್ಲಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರನ್ನು ಕಾಂಗ್ರೆಸ್ ಕ್ಲರ್ಕ್ ರೀತಿ ನಡೆಸಿಕೊಳ್ಳುತ್ತಿದೆ. ಅದನ್ನು ಅವರೇ ಹೇಳಿಕೊಂಡಿದ್ದಾರೆ. ಅವರ ಮೇಲೆ ಕಾಂಗ್ರೆಸ್ ಒತ್ತಡ ಹೇರುತ್ತಿದೆ ಎಂದರು.
ಮೋದಿ ತಪ್ಪು ಮಾಹಿತಿ ನೀಡ್ತಿದ್ದಾರೆ : ಮೋದಿ ಹೇಳಿಕೆಗೆ ಟ್ವೀಟ್ ಮೂಲಕ ಕುಮಾರ ಸ್ವಾಮಿ ತಿರುಗೇಟು ನೀಡಿದ್ದಾರೆ. ನಾನು ಸಮ್ಮಿಶ್ರ ಸರ್ಕಾರದಲ್ಲಿ ಒತ್ತಡ ಇದೆ ಹೇಳಿಲ್ಲ. ಮೋದಿ ತಪ್ಪು ಮಾಹಿತಿ ನೀಡಿದ್ದಾರೆ. ಅವರ ಇಂಥಾ ಹೇಳಿಕೆಗಳು ಸಮ್ಮಿಶ್ರ ಸರ್ಕಾರದ ಕೆಲಸಗಳಿಗೆ ಅಡ್ಡಿ ಆಗಲ್ಲ ಅಂದಿದ್ದಾರೆ.
ಮೋದಿ-ಕುಮಾರಸ್ವಾಮಿ`ಕ್ಲರ್ಕ್’ ವಾರ್!
TRENDING ARTICLES