Friday, November 22, 2024

ತಮಿಳುನಾಡು ನಿರ್ಣಯದ ವಿರುದ್ಧ ಗುಡುಗಿದ ಬೊಮ್ಮಾಯಿ

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೊದಲ ಬಾರಿಗೆ ತಮಿಳುನಾಡಿನ ವಿರುದ್ಧ ಗುಡುಗಿದ್ದಾರೆ. ತಮಿಳುನಾಡು ಸರ್ಕಾರ ಮೇಕೆದಾಟು ವಿಷಯದಲ್ಲಿ ತೆಗೆದುಕೊಂಡ ನಿರ್ಣಯವನ್ನು ಖಂಡನೆ ಮಾಡಿ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ತಮಿಳುನಾಡು ವಿಧಾನಸಭೆಯಲ್ಲಿ ಮೇಕೆದಾಟು ಯೋಜನೆ ವಿರುದ್ಧ ನಿರ್ಣಯ ಕೈಗೊಳ್ಳಲಾಗಿದೆ. ಇದು ಕಾನೂನು ಬಾಹೀರವಾಗಿದೆ.
ಒಂದು ರಾಜ್ಯ ಇನ್ನೊಂದು ರಾಜ್ಯದ ಹಕ್ಕನ್ನು ಆಕ್ರಮಿಸಿಕೊಳ್ಳುವಂತಹ ಜನ ವಿರೋಧಿ ನಿರ್ಣಯವಾಗಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ತಮಿಳುನಾಡಿಗೆ ನಂಬಿಕೆ ಇಲ್ಲದ ನಿರ್ಣಯ ಇದಾಗಿದೆ. ಈ ನಿರ್ಣಯವನ್ನು ಸಮಸ್ತ ಕರ್ನಾಟಕದ ಜನತೆ ಹಾಗೂ ಸರ್ಕಾರ ತೀವ್ರವಾಗಿ ಖಂಡಿಸುತ್ತದೆ. ಮೇಕೆದಾಟು ಯೋಜನೆ ಜಾರಿಗೆ ನಮ್ಮ ನಿರ್ಧಾರ ಅಚಲವಾಗಿದೆ.

ಮೇಕೆದಾಟು ಯೋಜನೆ ರಾಜ್ಯದಲ್ಲಿ ಹುಟ್ಟುವ ಕಾವೇರಿ ನದಿಗೆ ಸಂಬಂಧಿಸಿದ್ದಾಗಿದೆ. ಕಾವೇರಿ ನ್ಯಾಯಾಧೀಕರಣ ಅನ್ವಯ ತಮಿಳುನಾಡಿಗೆ 177.25 ಟಿಎಂಸಿ ನೀರನ್ನು ಕೊಟ್ಟಿದ್ದೇವೆ. ಉಳಿದ ನೀರಿನ ಮೇಲೆ ಕರ್ನಾಟಕದ ಹಕ್ಕು ಇದೆ. ತಮಿಳುನಾಡಿನ ಈ ರಾಜಕೀಯ ನಿರ್ಧಾರವನ್ನು ನಾವು ಲೆಕ್ಕಿಸಲ್ಲ. ಮೇಕೆದಾಟು ಯೋಜನೆಯನ್ನು ಕೈಗೆತ್ತಿಕೊಳ್ಳಲು ನಮ್ಮ ಸರ್ಕಾರ ಎಲ್ಲ ರೀತಿಯ ಕ್ರಮ ಕೈಗೊಳ್ಳಲಿದೆ” ಎಂದು ಟ್ವಿಟರ್ ಮೂಲಕ ಸಿಎಂ ಬೊಮ್ಮಾಯಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

RELATED ARTICLES

Related Articles

TRENDING ARTICLES