Friday, November 22, 2024

ಸಚಿವ ಸೋಮಣ್ಣ ವಿರುದ್ಧ ಸಮನ್ಸ್​​ ಜಾರಿ : ಆದಾಯ ಮೀರಿ ಆಸ್ತಿ ಗಳಿಕೆ ಆರೋಪ

ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಆರೋಪದಲ್ಲಿ ಸಚಿವ ವಿ. ಸೋಮಣ್ಣ ವಿರುದ್ಧ ಸಮನ್ಸ್ ಜಾರಿ ಮಾಡಲಾಗಿದೆ. ಮತ್ತು ಜನಪ್ರತಿನಿಧಿಗಳ ನ್ಯಾಯಾಲಯದಿಂದ ಆದೇಶ ನೀಡಲಾಗಿದೆ.

2013 ರಲ್ಲಿ ರಾಮಕೃಷ್ಣ ಎಂಬವರು ಖಾಸಗಿ ದೂರು ದಾಖಲಿಸಿದ್ದರು. ಈ ಬಗ್ಗೆ ಕೋರ್ಟ್ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಿತ್ತು. ಲೋಕಾಯುಕ್ತ ಪೊಲೀಸರಿಗೆ ಕೋರ್ಟ್ ಸೂಚಿಸಿತ್ತು‌. ಆದರೆ, ಲೋಕಾಯುಕ್ತ ಪೊಲೀಸರು ಆದಾಯ ಮೀರಿ ಆಸ್ತಿ ಗಳಿಸಿಲ್ಲವೆಂದು ವರದಿ ನೀಡಿದ್ದರು. ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್​ನ್ನು ಕೋರ್ಟ್ ತಿರಸ್ಕರಿಸಿದೆ.

ಶಾಸಕನಾಗುವ ಮೊದಲಿನ ಆದಾಯ, ನಂತರದ ಆದಾಯ, ಗಳಿಸಿದ ಆಸ್ತಿಯ ಸೂಕ್ತ ವಿವರಣೆಯನ್ನು ಪೊಲೀಸರು ನೀಡಿಲ್ಲ. ಹೀಗಾಗಿ ಅಸಮರ್ಪಕ ತನಿಖೆ ಎಂದು ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ. ಹಾಗೂ ಏಪ್ರಿಲ್​ 16ಕ್ಕೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್ ಜಾರಿಗೆ ನ್ಯಾ. ಬಿ.ಜಯಂತ್ ಕುಮಾರ್ ಆದೇಶ ನೀಡಿದ್ದಾರೆ.

RELATED ARTICLES

Related Articles

TRENDING ARTICLES