ಬೆಂಗಳೂರು: ಹಿಂದೂ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ಹೇರಲಾಗಿದೆ. ಹಲವೆಡೆ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು ಸದನದಲ್ಲೂ ಈ ವಿಚಾರ ಪ್ರತಿಧ್ವನಿಸಿದೆ. ಹೀಗಾಗಿ ಹಿಂದೂ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ, ಈ ರೀತಿ ಅವಕಾಶ ನಿರಾಕರಿಸುವುದು ತಪ್ಪು ಎಂದಿದ್ದಾರೆ.
ಅಂಗಡಿ ಟೆಂಡರ್ ನಿರಾಕರಿಸುವುದು, ಅವಕಾಶ ನಿರಾಕರಣೆ ಮಾಡುವುದು ದೌರ್ಜನ್ಯ ಎನಿಸಿಕೊಳ್ಳುತ್ತದೆ. ಇದು ಮೂಲಭೂತ ಹಕ್ಕನ್ನು ಹತ್ತಿಕ್ಕುವ ಕೆಲಸ. ಇದು ಸಂಪೂರ್ಣ ಕಾನೂನು ಬಾಹಿರ ಎಂದಿದ್ದಾರೆ. ನಮ್ಮ ದೇಶದಲ್ಲಿ ಮುಕ್ತ ವ್ಯಾಪಾರಕ್ಕೆ ಅವಕಾಶವಿದೆ. ಮುಕ್ತ ವ್ಯಾಪಾರಕ್ಕೆ ನಿರ್ಬಂಧಿಸುವುದು ಕಾನೂನುಬಾಹಿರವಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.