ನವದೆಹಲಿ : ರಾಜಧಾನಿ ನವದೆಹಲಿಯ ಮೂರು ಮಹಡಿಯ ವಾಣಿಜ್ಯ ಕಟ್ಟಡವೊಂದರಲ್ಲಿ ಶುಕ್ರವಾರ ( ನಿನ್ನೆ) ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 27 ಜನರು ಸಜೀವವಾಗಿ ದಹನವಾಗಿದ್ದಾರೆ.
ಇನ್ನು ಘಟನೆಯಲ್ಲಿ 70 ಜನರನ್ನು ರಕ್ಷಿಸಲಾಗಿದ್ದು, 40ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಪೈಕಿ 10 ಜನರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮುಂಡ್ಕಾ ಮೆಟ್ರೋ ನಿಲ್ದಾಣದ ಸಮೀಪದಲ್ಲೇ ಇರುವ ಕಟ್ಟಡಕ್ಕೆ ಬೆಂಕಿ ಬಿದ್ದ ಬಗ್ಗೆ ಸಂಜೆ 4.30ರ ವೇಳೆಗೆ ಅಗ್ನಿಶಾಮಕ ಕಚೇರಿಗೆ ಕರೆ ಬಂದಿತ್ತು. ಕೂಡಲೇ ಸ್ಥಳಕ್ಕೆ ಆಗಮಿಸಿದ್ದ 30ಕ್ಕೂ ಹೆಚ್ಚು ಅಗ್ನಿಶಾಮಕ ತಂಡದ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸಕ್ಕೆ ಮುಂದಾದರು. ಆದರೆ ಬೆಂಕಿ ತಹಬದಿಗೆ ಬಂದು, ಸಿಬ್ಬಂದಿ ಕೆಲವು ಕೋಣೆಯೊಳಗೆ ಪ್ರವೇಶಿಸಿದ ವೇಳೆ 27 ಜನರ ಶವ ಸಿಕ್ಕಿದೆ. ಅಗ್ನಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ.
ಸಿಸಿಟಿವಿ ಮತ್ತು ರೂಟರ್‌ಗಳನ್ನು ಉತ್ಪಾದಿಸುವ ಕಂಪನಿಯೊಂದರ ಕಚೇರಿ ಕಟ್ಟಡದ ಮೊದಲ ಮಹಡಿಯಲ್ಲಿದೆ. ಅಲ್ಲಿ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ಎಲ್ಲಾ ಮಹಡಿಗಳಿಗೂ ಹಬ್ಬಿ ಭಾರೀ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Delhi Mundka Fire | Morning visuals from the spot where a massive fire broke out in a building yesterday, May 13
“27 people died and 12 got injured in the fire incident,” said DCP Sameer Sharma, Outer District pic.twitter.com/wRErlnj3h0
— ANI (@ANI) May 14, 2022