ನವದೆಹಲಿ : ಪಂಚರಾಜ್ಯ ಚುನಾವಣೆ ಬಳಿಕ ತೈಲ ಬೆಲೆಗಳಲ್ಲಿ ಏರಿಕೆಯಾಗಿದ್ದರಿಂದ ವಾಹನ ಸವಾರರು ಇನ್ನಿಲ್ಲದ ಸಮಸ್ಯೆ ಅನುಭವಿಸುತ್ತಿದ್ದರು. ಅದರೆ ಇದೀಗ ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ಬಿಗ್ ರಿಲೀಫ್ ನೀಡಿದ್ದು, ಪೆಟ್ರೋಲ್-ಡಿಸೇಲ್ ಮೇಲಿನ ಅಬಕಾರಿ ಸುಂಕ ಇಳಿಕೆ ಮಾಡಿದೆ.
ಪೆಟ್ರೋಲ್ ಮೇಲೆ ಪ್ರತಿ ಲೀಟರ್ಗೆ 8 ರೂಪಾಯಿ ಹಾಗು ಡಿಸೇಲ್ ಮೇಲೆ 6 ರೂಪಾಯಿ ಅಬಕಾರಿ ಸುಂಕ ಇಳಿಕೆ ಮಾಡಿದೆ. ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಹತ್ವದ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.
ಶನಿವಾರ ರಾತ್ರಿಯಿಂದ ಪರಿಷ್ಕೃತ ಪೆಟ್ರೋಲ್, ಡೀಸೆಲ್ ಹಾಗೂ ಎಲ್ಪಿಜಿ ದರಗಳು ಜಾರಿಗೆ ಬರಲಿವೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ದೀರ್ಘ ಕಾಲದಿಂದ ಜನಸಾಮಾನ್ಯರು ಇಂಧನ ಪೆಟ್ರೋಲ್-ಡಿಸೇಲ್ ಹಾಗೂ ಗ್ಯಾಸ್ ಬೆಲೆ ಏರಿಕೆಯ ಹಿನ್ನಲೆ ಸರ್ಕಾರವನ್ನು ದೂರುತ್ತಿದ್ದರು. ಆದರೆ ಇದೀಗ ಸರ್ಕಾರ ಈ ವಿಷಯದಲ್ಲಿ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.
We are reducing the Central excise duty on Petrol by Rs 8 per litre and on Diesel by Rs 6 per litre. This will reduce the price of petrol by Rs 9.5 per litre and of Diesel by Rs 7 per litre: Union Finance Minister Nirmala Sitharaman
(File Pic) pic.twitter.com/13YJTpDGIf
— ANI (@ANI) May 21, 2022