Thursday, December 19, 2024

ಲಾರಿ ಬಸ್‌ ಮುಖಾಮುಖಿ ಡಿಕ್ಕಿ : 12 ಜನರಿಗೆ ಗಂಭೀರ ಗಾಯ

ಆನೇಕಲ್ : ಕಂಟೇನರ್ ಲಾರಿ, ಬಸ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 12 ಮಂದಿಗೆ ಗಂಭೀರ ಗಾಯವಾಗಿರುವ ಘಟನೆ ಆನೇಕಲ್​ ಗಡಿಯ ಕುರುಬರಪಲ್ಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಇಂದು ಸಂಜೆ ಸುಮಾರು ಏಳು ಗಂಟೆಗೆ ಬೆಂಗಳೂರಿನಿಂದ ಚೆನ್ನೈಗೆ ಹೊರಟಿದ್ದ ಖಾಸಗಿ ಬಸ್​ಗೆ ಕಂಟೇನರ್ ಲಾರಿ ಡಿಕ್ಕಿ ಹೊಡೆದಿದೆ. ಇದು ತಮಿಳುನಾಡಿನ ಕೃಷ್ಣಗಿರಿ ಹಾಗೂ ಸುಳಗಿರಿ ರಾಷ್ಟ್ರೀಯ ಹೆದ್ದಾರಿಯಾಗಿದ್ದು, ಬಸ್ಸಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

ಸದ್ಯ ಗಾಯಾಳುಗಳನ್ನು ಸ್ಥಳೀಯರ ಸಹಕಾರದಿಂದ ಆಸ್ಪತ್ರೆಗೆ ಅಂಬುಲೆನ್ಸ್​ಗಳ ರವಾನೆ ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಾಗೂ ಉಂಟಾದ ಭಾರೀ ಅಪಾಯದಿಂದ ಜನರು ಪಾರಾಗಿದ್ದಾರೆ.

RELATED ARTICLES

Related Articles

TRENDING ARTICLES