ಚಿಕ್ಕಮಗಳೂರು: ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇನ್ನೂ 3 ದಿನ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಈ ವರ್ಷವೂ ಮುಂಗಾರಿನ ಅಬ್ಬರ ಹೆಚ್ಚಿರುವುದರಿಂದ ಚಿಕ್ಕಮಗಳೂರು ಜಿಲ್ಲಾದ್ಯಂತ ಹೈಅಲರ್ಟ್ ಘೋಷಿಸಲಾಗಿದೆ.
ಇಂದಿನಿಂದ ಜೂನ್ 11ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ. ಇಂದು ಬೆಂಗಳೂರು, ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಲಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ 3 ದಿನ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಪ್ರತಿ ವರ್ಷವೂ ಮಳೆಗಾಲದಲ್ಲಿ ಸಾಕಷ್ಟು ಅನಾಹುತಗಳು ಸಂಭವಿಸುತ್ತವೆ. ಈ ಬಾರಿ ಕಳೆದ ವರ್ಷಕ್ಕಿಂತ ಹೆಚ್ಚು ಮುಂಗಾರು ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಕಟ್ಟೆಚ್ಚರ ವಹಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಗಾಗಿ ಚಿಕ್ಕಮಗಳೂರು ಜಿಲ್ಲಾಡಳಿತ ಈ ಬಾರಿ 34 ತಂಡಗಳನ್ನೂ ನಿಯೋಜನೆ ಮಾಡಿದೆ.