ನವದೆಹಲಿ: ಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ (ಇ.ಡಿ) ನಡೆಯುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಚಾರಣೆಯು ಬುಧವಾರ ಮುಕ್ತಾಯಗೊಂಡಿದೆ.
ಶುಕ್ರವಾರ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು ರಾಹುಲ್ ಗಾಂಧಿಗೆ ಸಮನ್ಸ್ ನೀಡಿದೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ಟ್ವೀಟ್ ಮಾಡಿದೆ.
ರಾಹುಲ್ ಅವರನ್ನು ಇ.ಡಿ. ವಿಚಾರಣೆಗೆ ಒಳಪಡಿಸುವುದನ್ನು ವಿರೋಧಿಸಿ, ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಇಂದು ಸಹ ದೇಶದ ಹಲವೆಡೆ ಪ್ರತಿಭಟನೆ ನಡೆಸಿದರು.
ದೆಹಲಿಯ ಅಕ್ಬರ್ ರೋಡ್‌ನಲ್ಲಿ ಇರುವ ಕಾಂಗ್ರೆಸ್ ಪ್ರಧಾನ ಕಚೇರಿಯ ಬಳಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಅಲ್ಲಿ ಪ್ರತಿಭಟನೆ ನಡೆಸಿದವರನ್ನು ಪೊಲೀಸರು ವಶಕ್ಕೆ ಪಡೆದರು.
ED asks Congress leader Rahul Gandhi to appear on Friday to rejoin the investigation in the National Herald case. pic.twitter.com/7ppYfCn0kJ
— ANI (@ANI) June 15, 2022