ಹಿಮಾಚಲ ಪ್ರದೇಶದ ಧರ್ಮಾಶಾಲಾಗೆ ಭೇಟಿ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಎರಡು ದಿನಗಳ ಪ್ರವಾಸವನ್ನು ಇಂದು ಆರಂಭಿಸಿದ್ದಾರೆ.
ಧರ್ಮಶಾಲಾದ ಪೊಲೀಸ್ ಸ್ಟೇಡಿಯಂನಲ್ಲಿ ವಿಶೇಷವಾಗಿ ರಚಿಸಲಾದ ಹೆಲಿಪ್ಯಾಡ್ಗೆ ಮೋದಿ ಆಗಮಿಸಲಿದ್ದು, ಅಲ್ಲಿ ರಾಜ್ಯದ ರಾಜ್ಯಪಾಲರು, ಸಿಎಂ ಮತ್ತು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರನ್ನು ಸ್ವಾಗತಿಸಲಿದ್ದಾರೆ.
ಪ್ರಧಾನಿ ಭೇಟಿಗೂ ಮುನ್ನ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈ ರಾಂ ಠಾಕೂರ್ ಬುಧವಾರ ಭೇಟಿಯ ಸಿದ್ಧತೆಗಳನ್ನು ಪರಿಶೀಲಿಸಿದರು. ಮುಖ್ಯಮಂತ್ರಿಗಳು ಪರೀಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ, ಶಿಷ್ಟಾಚಾರದ ಪ್ರಕಾರ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅವರು ಸೂಚಿಸಿದ್ದಾರೆ.