ಬೆಂಗಳೂರು : ದೇಶದ ವಿವಿಧೆಡೆ ಮುಂಗಾರು ಪ್ರವೇಶವಾಗಲಿದ್ದು, ಕರ್ನಾಟಕ, ದೆಹಲಿ ಹಾಗೂ ಮುಂಬೈನಲ್ಲಿ ಮಳೆ ಸುರಿಯುತ್ತಿದೆ. ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಜುಲೈ 5ರ ವರೆಗೆ ಗುಡುಗು ಸಹಿತ ಧಾರಾಕಾರ ಮಳೆ ಸುರಿಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ. ಮುಂಬೈನ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ವರದಿಯ ಪ್ರಕಾರ, ನಗರದಲ್ಲಿ ಮುಂದಿನ 36 ಗಂಟೆಗಳ ಕಾಲ ಮಧ್ಯಂತರ ಮಳೆಯಾಗಲಿದ್ದು, ನಂತರ ತೀವ್ರತೆ ಕಡಿಮೆಯಾಗುವ ನಿರೀಕ್ಷೆಯಿದೆ.
ಮಹಾರಾಷ್ಟ್ರದ ರಾಯಗಡ ಮತ್ತು ರತ್ನಗಿರಿ ಜಿಲ್ಲೆಗಳಲ್ಲಿ ಮುಂಬರುವ ಎರಡು ದಿನಗಳವರೆಗೆ ಆರೆಂಜ್ ಅಲರ್ಟ್ಘೋಷಣೆ ಮಾಡಲಾಗಿದೆ. ದೆಹಲಿಯಲ್ಲೂ ಮಳೆಯಾಗುತ್ತಿದ್ದು, ಇನ್ನೂ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಉತ್ತರಾಖಂಡದಲ್ಲು ಬಿಟ್ಟುಬಿಟದೆ ಮಳೆಯಾಗುತ್ತಿದ್ದು, ಕೆಲ ಕಡೆ ಭೂ ಕುಸಿತ ಉಂಟಾಗಿದೆ.