Tuesday, November 5, 2024

ಬೆಂಗಳೂರಿನಲ್ಲಿ ಇವಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ

ಬೆಂಗಳೂರು : ಸಿಲಿಕಾನ್​ ಸಿಟಿಯಲ್ಲಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಇವಿ (ಎಲೆಕ್ಟ್ರಿಕ್ ವೆಹಿಕಲ್) ಅಭಿಯಾನ ಕಾರ್ಯಕ್ರಮ ಹಾಗೂ 152 ಇವಿ ವೆಹಿಕಲ್ ಚಾರ್ಜಿಂಗ್ ಸ್ಟೇಷನ್ ಗಳನ್ನು ಸಿಎಂ ಉದ್ಘಾಟಿಸಿದರು.

ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಕಾರ್ಯಕ್ರಮ ‌ಆಯೋಜನೆಗೊಂಡಿದೆ. ಪ್ಯಾಲೇಸ್ ಗ್ರೌಂಡನ ಚಾಮರ ವಜ್ರ ಗ್ರೌಂಡಿನಲ್ಲಿ ಮೂರು ದಿನದ EV ಎಕ್ಸ್ ಪೋ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ‌, ಇಂಧನ ಸಚಿವ ಸುನೀಲ್ ಕುಮಾರ್, ಕೇಂದ್ರ ಸಚಿವ ಭಗವಂತ್ ಖೂಬಾ, ಸಚಿವ ಉಮೇಶ್ ಕತ್ತಿ,ಶಾಸಕ ಹರತಾಳು ಹಾಲಪ್ಪ ಭಾಗಿಯಾದ್ರು‌. ‌ಕಾರ್ಯಕ್ರಮದಲ್ಲಿ‌ ಮಾತನಾಡಿದ ಸಿಎಂ ಬೊಮ್ಮಾಯಿ‌,ಇವಿ ವಾಹನದ ವೆಚ್ಚ ಜನಸಾಮಾನ್ಯರಿಗೆ ನಿಲುಕುವಂತಿರಬೇಕು, ಆಗ ಮಾತ್ರ ಅದರ ಬಳಕೆ ಹೆಚ್ಚಾಗುತ್ತದೆ ಈ ಬಗ್ಗೆ ಉತ್ಪಾದಕರು ಗಮನ ಹರಿಸಬೇಕು‌ ಎಂದರು.

ಇವಿ ವಾಹನಗಳಿಗೆ ಅಗತ್ಯವಿರುವ ಚಾರ್ಜರ್‍ಗಳನ್ನು ನಮ್ಮ ಸರ್ಕಾರ ಇವಿ ಪಾಲಿಸಿ ಮಾಡುವ ಮೂಲಕ ಬೆಸ್ಕಾಂನ್ನು ನೋಡಲ್ ಏಜೆನ್ಸಿ ಮಾಡಿ ಬೆಂಗಳೂರಿನಲ್ಲಿ ಚಾರ್ಜಿಂಗ್ ಸ್ಟೇಷನ್‍ಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಸ್ಥಾಪಿಸಲಾಗಿದೆ. ಇನ್ನು ಹೆಚ್ಚಿನ ಚಾರ್ಜಿಂಗ್ ಸ್ಟೇಷನ್‍ಗಳ ಅವಶ್ಯಕತೆ ಇದೆ. ಅವುಗಳನ್ನು ಬೆಸ್ಕಾಂ ವತಿಯಿಂದ ಸ್ಥಾಪಿಸಲಾಗುವುದು ಎಂಬ ವಿಶ್ವಾಸವಿದೆ ಎಂದರು.

RELATED ARTICLES

Related Articles

TRENDING ARTICLES