ಕಾರವಾರ : ಉತ್ತರಕನ್ನಡದಲ್ಲಿ ವರುಣನ ಆರ್ಭಟ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಕಳೆದ 3-4 ದಿನಗಳಿಂದ ಮಳೆ ಸುರಿಯುತ್ತಿದ್ದು, ಮಳೆಯ ಅಬ್ಬರ ದಿನಕ್ಕೊಂದು ಅವಾಂತರಗಳನ್ನ ಸೃಷ್ಟಿ ಮಾಡುತ್ತಿದೆ. ಕರಾವಳಿ,ಮಲೆನಾಡು, ಬಯಲುಸೀಮೆ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಸಾಕಷ್ಟು ಅನಾಹುತಗಳು ನಡೆದಿವೆ.
ಜಿಲ್ಲೆಯಲ್ಲಿ ಮಳೆ ಆರ್ಭಟ ಜೋರಾಗುತ್ತಿದ್ದು, ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಹೊನ್ನಾವರ ತಾಲ್ಲೂಕಿನ ಹಳದೀಪುರದ ಬಗ್ರಾಣಿ ಕ್ರಾಸ್ ನಲ್ಲಿ ಬೃಹದಾಕಾರದ ಅಶ್ವಥ ಮರವೊಂದು ಮನೆಯ ಮೇಲೆ ಬಿದ್ದು ಪರಿಣಾಮ ಮನೆಯಲ್ಲಿದ್ದ ಇಬ್ಬರು ಮಹಿಳೆಯರು, ಓರ್ವ ಬಾಲಕ ಸೇರಿ 6 ಮಂದಿ ಗಾಯಗೊಂಡಿದ್ದಾರೆ. ಗಂಗಾವಳಿ ಹಾಗೂ ಅಘನಾಶಿನಿ ನದಿಗಳು ಉಕ್ಕಿ ಹರಿಯುತ್ತಿದ್ದು, ನದಿ ಪಾತ್ರದ ಜನ್ರು ಆತಂಕದಲ್ಲಿದ್ದಾರೆ.
ಜಿಲ್ಲೆಯಲ್ಲಿ ಇನ್ನೂ 3-4 ದಿನಗಳ ಕಾಲ ಗಾಳಿ ಸಹಿತ ಮಳೆ ಸುರಿಯುವ ಮುನ್ನೆಚ್ಚರಿಕೆಯನ್ನ ಹವಾಮಾನ ಇಲಾಖೆ ನೀಡಿದ್ದು, ಜುಲೈ 8ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.