Friday, November 22, 2024

ರೋಹಿತ್​​​​ ಶರ್ಮಾ ಹೊಸ ದಾಖಲೆ

ಟಿ-20 ಕ್ರಿಕೆಟ್​ ಇತಿಹಾಸದಲ್ಲಿ ಸತತವಾಗಿ 13 ಜಯ ದಾಖಲಿಸಿದ ಮೊದಲ ಕ್ಯಾಪ್ಟನ್ ಆಗಿ ರೋಹಿತ್ ಶರ್ಮಾ ಹೊರಹೊಮ್ಮಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಮೂರು ಟಿ-20 ಪಂದ್ಯಗಳ ಸರಣಿಯ ಮೊದಲ ಪಂದ್ಯ ಇದಾಗಿತ್ತು. ವಿರಾಟ್ ಕೊಹ್ಲಿ ಅವರಿಂದ ನಾಯಕತ್ವದ ಜವಾಬ್ದಾರಿ ವಹಿಸಿಕೊಂಡ ನಂತರ ರೋಹಿತ್ ಶರ್ಮಾ, ನ್ಯೂಜಿಲ್ಯಾಂಡ್​, ವೆಸ್ಟ್ ಇಂಡೀಸ್, ಶ್ರೀಲಂಕಾ ಮತ್ತು ಈಗ ಇಂಗ್ಲೆಂಡ್ ತಂಡಗಳ ವಿರುದ್ಧ ತಂಡವನ್ನು ಜಯದ ದಡ ಮುಟ್ಟಿಸಿದ್ದಾರೆ.

ಈ ಮುನ್ನ, ಕೋವಿಡ್​ ಸೋಂಕು ತಗುಲಿದ ಕಾರಣದಿಂದ ರೋಹಿತ್ ಶರ್ಮಾ ಬರ್ಮಿಂಗ್​ಹ್ಯಾಮ್​ನಲ್ಲಿ ನಡೆದ ಇಂಗ್ಲೆಂಡ್​ ವಿರುದ್ಧದ 5ನೇ ಟೆಸ್ಟ್​ನಲ್ಲಿ ಆಡುವುದರಿಂದ ವಂಚಿತರಾಗಿದ್ದರು. ಹಾರ್ದಿಕ್ ಪಾಂಡ್ಯ ಅವರ ಆಲ್​ರೌಂಡ್ ಆಟದಿಂದ ಭಾರತವು ಮೊದಲ ಇನ್ನಿಂಗ್ಸ್​ನಲ್ಲಿ 8 ವಿಕೆಟ್ ನಷ್ಟಕ್ಕೆ 198 ರನ್ ಗಳಿಸಿತ್ತು. ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್ ಮತ್ತು ದೀಪಕ್ ಹೂಡಾ ಕ್ರಮವಾಗಿ 24, 39 ಮತ್ತು 33 ರನ್​ ಗಳಿಸಿದರು. ಭಾರತದ ಪರವಾಗಿ, ಅರ್ಶದೀಪ್ ಸಿಂಗ್ ಮತ್ತು ಸ್ಪಿನ್ನರ್ ಯಜುವೇಂದ್ರ ಚಾಹಲ್ ತಲಾ ಎರಡು ವಿಕೆಟ್​ ಹಾಗೂ ಭುವನೇಶ್ವರ್ ಕುಮಾರ್ ಮತ್ತು ಹರ್ಷಲ್ ಪಟೇಲ್ ತಲಾ ಒಂದು ವಿಕೆಟ್ ಪಡೆದು ಇಂಗ್ಲೆಂಡ್​ ತಂಡವನ್ನು 148ಕ್ಕೆ ಆಲೌಟ್​ ಮಾಡಿದರು.

ಸರಣಿಯ ಎರಡನೇ ಪಂದ್ಯವು ಬರ್ಮಿಂಗ್​ಹ್ಯಾಮ್​ನಲ್ಲಿ ಭಾನುವಾರ ನಡೆಯಲಿದೆ.

RELATED ARTICLES

Related Articles

TRENDING ARTICLES