Saturday, November 23, 2024

ಉಕ್ಕಿ ಹರಿಯುತ್ತಿರುವ ನೇತ್ರಾವತಿ- ಕುಮಾರಧಾರ

ಮಂಗಳೂರು : ಶಾಂತಗೊಂಡಿದ್ದ ನೇತ್ರಾವತಿ- ಕುಮಾರಧಾರ ನದಿಗಳು ಮತ್ತೆ ರೌದ್ರವತಾರ ತಾಳುವ ಲಕ್ಷಣಗಳು ಕಾಣುತ್ತಿದ್ದು, ಭಾನುವಾರ ನಸುಕಿನ ಜಾವದಿಂದಲೇ ಉಭಯ ನದಿಗಳಲ್ಲಿ ನೀರ ಹರಿವು ಹೆಚ್ಚಳಗೊಂಡಿದ್ದು, ಅಪಾಯದ ಮಟ್ಟ ತಲುಪಿದೆ.

ಈಗಾಗಲೇ ನದಿ ಪಾತ್ರದ ಪ್ರದೇಶಗಳು ಜಲಾವೃತಗೊಂಡಿವೆ. ಉಭಯ ನದಿಗಳಲ್ಲಿ ನೀರು ಹೆಚ್ಚಳವಾಗುತ್ತಲೇ ಇದ್ದು 2019ರ ಬಳಿಕ ಮತ್ತೊಮ್ಮೆ ನೆರೆ ಬರುವ ಸಾಧ್ಯತೆ ಕಾಣಿಸಿಕೊಂಡಿದೆ. ಕಳೆದ ಕೆಲವು ದಿನಗಳಲ್ಲಿ ನೆರೆ ಭೀತಿ ಮೂಡಿಸಿದ ನೇತ್ರಾವತಿ- ಕುಮಾರಧಾರ ನದಿಗಳು ಶನಿವಾರ ಶಾಂತಗೊಂಡಿದ್ದವು. ಉಭಯ ನದಿಗಳಲ್ಲಿ ನೀರ ಹರಿವು ತೀರಾ ಕಡಿಮೆಯಾಗಿತ್ತು. ಆದರೆ ಶನಿವಾರ ಸಂಜೆಯಿಂದ ನೀರು ಏರಿಕೆಯಾಗುತ್ತಲೇ ಇದ್ದು, ಭಾನುವಾರ ನಸುಕಿನ ಜಾವ ಎರಡು ಗಂಟೆಯ ಬಳಿಕ ಅಪಾಯದ ಮಟ್ಟದಲ್ಲಿ ಉಭಯ ನದಿಗಳ ನೀರು ಹರಿಯುತ್ತಿದೆ.

ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ಬಳಿ ಇರುವ 38 ಮೆಟ್ಟಿಲುಗಳಲ್ಲಿ ಒಂದು ಮೆಟ್ಟಿಲಷ್ಟೇ ಕಾಣುತ್ತಿದ್ದು, ಉಳಿದ ಮೆಟ್ಟಿಲುಗಳೆಲ್ಲಾ ಮುಳುಗಿವೆ. ಈ ಒಂದು ಮೆಟ್ಟಿಲು ಮುಳುಗಿದರೆ ನೀರು ದೇವಾಲಯದ ವಠಾರಕ್ಕೆ ಪ್ರವೇಶಿಸಲಿದೆ.

RELATED ARTICLES

Related Articles

TRENDING ARTICLES