ಉಡುಪಿ : ಕರಾವಳಿ, ಮಲೆನಾಡಿನಲ್ಲಿ ಕಳೆದ ಕೆಲ ದಿನಗಳಿಂದ ಭಾರಿ ಗಾಳಿ ಮಳೆಯಾಗುತ್ತಿದ್ದು, ಅಲ್ಲಲ್ಲಿ ಗುಡ್ಡ ಕುಸಿಯುತ್ತಿದೆ.
ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹೆಬ್ರಿ ತಾಲೂಕು ಆಗುಂಬೆ ಘಾಟ್‌ನ ನಾಲ್ಕನೇ ತಿರುವಿನಲ್ಲಿ ಭೂ ಕುಸಿತ ಉಂಟಾಗಿದೆ.
ಸುಮಾರು 30 ಮೀಟರ್‌ನಷ್ಟು ಭೂಕುಸಿತ ಉಂಟಾಗಿದ್ದು, ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆಗುಂಬೆ ಘಾಟಿಯಲ್ಲಿ ಗುಡ್ಡ ಜರಿದ ಪರಿಣಾಮ ತಾತ್ಕಾಲಿಕವಾಗಿ ಸಂಚಾರ ಸ್ಥಗಿತಗೊಂಡಿದೆ. ಪ್ರಯಾಣಿಕರು ಬದಲಿ ರಸ್ತೆ ಉಪಯೋಗಿಸುವುದು ಸೂಕ್ತ ಎಂದು ಜಿಲ್ಲಾಡಳಿತ ತಿಳಿಸಿದೆ.
ರಸ್ತೆ ತೆರವು ಕಾರ್ಯಾಚರಣೆ ಈಗಾಗಲೇ ಆರಂಭವಾಗಿದ್ದು, ಮುಂದಿನ ಎರಡು ದಿನಗಳಲ್ಲಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗುವುದು ಪೊಲೀಸ್ ಹಾಗೂಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಬದಲಿ ಮಾರ್ಗವಾಗಿ ತೀರ್ಥಹಳ್ಳಿ- ನಿಟ್ಟೂರು- ಕೊಲ್ಲೂರು ಮುಖಾಂತರ ಕರಾವಳಿಗೆ ರಸ್ತೆ ಸಂಪರ್ಕ ಕಲ್ಪಿಸಲಾಗಿದೆ. ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನಾದ್ಯಂತ ಅತ್ಯಧಿಕ ಮಳೆಯಾಗುತ್ತಿದ್ದು, ತೆರವು ಕಾರ್ಯಾಚರಣೆಗೆ ಅಡಚಣೆ ಉಂಟಾಗುತ್ತಿದೆ.