ಬೆಂಗಳೂರು : ಕಬ್ಬು ಬೆಳೆಗಾರರಿಗೆ ಬೆಲೆಯಲ್ಲಿ ಮೋಸ, ತೂಕದಲ್ಲಿ ವಂಚನೆ ಹಾಗೂ ಪಾವತಿಯಲ್ಲಿ ವಿಳಂಬ ಆರೋಪ ಹಿನ್ನಲೆಯಲ್ಲಿ ಭಾರಿ ಪ್ರತಿಭಟನೆ ಮೆರವಣಿಗೆ ನಡೆಯಲಿದೆ.
ಸರ್ಕಾರದ ವಿರುದ್ಧ ರಾಜ್ಯದ ಕಬ್ಬು ಬೆಳೆಗಾರರು ಸಿಡಿದೆದ್ದಿದ್ದಾರೆ . ನಾಳೆ ಬೆಂಗಳೂರಿನಲ್ಲಿ ಭಾರಿ ಪ್ರತಿಭಟನೆ ಮೆರವಣಿಗೆ ನಡೆಯಲಿದೆ. ನಾಳೆ ಮೆಜೆಸ್ಟಿಕ್ ಸುತ್ತಮುತ್ತ ಜಾಮ್… ಜಾಮ್.. ಸಾಧ್ಯತೆ ಇದೆ, ಸರ್ಕಾರದ ನಿರ್ಲಕ್ಷ್ಯ ಧೋರಣೆ ಖಂಡಿಸಿ ರೈತರು ಪ್ರೊಟೆಸ್ಟ್ ಮಾಡುತ್ತಿದ್ದು, ಅನ್ನದಾತರಿಂದ ನಾಳೆ ಬೆಳಗ್ಗೆ ಸಿಎಂ ಮನೆ ಮುತ್ತಿಗೆ ಕಾರ್ಯಕ್ರಮ ನಡೆಯಲಿದೆ.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಬೃಹತ್ ರ್ಯಾಲಿ ನಡೆಯಲಿದ್ದು, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಬ್ಬು ಬೆಳೆಗಾರರು ಸಿಡಿದೆದ್ದಿದ್ದಾರೆ. ಕಬ್ಬು ಬೆಳೆಗಾರರಿಗೆ ಬೆಲೆಯಲ್ಲಿ ಮೋಸ, ತೂಕದಲ್ಲಿ ವಂಚನೆ ಹಾಗೂ ಪಾವತಿಯಲ್ಲಿ ವಿಳಂಬ ಆರೋಪ ಈ ಎಲ್ಲಾ ವಿಚಾರ ಗೊತ್ತಿದ್ರು ಸರ್ಕಾರ ಇದರ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಕಾರಣ ಕಬ್ಬು ಕಾರ್ಖಾನೆಯ ಮಾಲೀಕರೇ ಸಚಿವ ಸಂಪುಟದಲ್ಲಿ ಮಂತ್ರಿಗಳಾಗಿದ್ದಾರೆ.
ಇನ್ನು, ರಾಜ್ಯ ಕಬ್ಬು ಬೆಳೆಗಾರರಿಗೆ ನ್ಯಾಯ ಒದಗಿಸಬೇಕೆಂದು ಸಿಎಂ ಮನೆ ಮುತ್ತಿಗೆ ಕಾರ್ಯಕ್ರಮ ನಡೆಯಲಿದ್ದು, ಕಬ್ಬು ಬೆಳೆಗಾರರಿಗೆ ನ್ಯಾಯ ಕೇಳಿ ನಾಳೆ ರಾಜ್ಯದ ರೈತರು ಸಿಎಂ ಮನೆ ಮುತ್ತಿಗೆ ಹಾಕಲು ರೈತರು ತೀರ್ಮಾನ ಮಾಡಿದ್ದಾರೆ. ರಾಜ್ಯದ ಮೂಲೆ ಮೂಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ರೈತರು ರಾಜಧಾನಿಗೆ ಬರ್ತಾರೆ ಬೆಳಿಗ್ಗೆ 11 ಗಂಟೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಸಿಎಂ ಮನೆ ಮುತ್ತಿಗೆ ಹಾಕ್ತಿವಿ. ನ್ಯಾಯ ಸಿಗೋವರೆಗೂ ನಾವು ಅಲ್ಲಿಂದ ವಾಪಸ್ ಬರೋದಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಎಚ್ಚರಿಕೆಯನ್ನು ನೀಡಿದ್ದಾರೆ.