Saturday, May 10, 2025

ರಾಜ್ಯಾದ್ಯಂತ ಮಳೆ ಮುಂದುವರಿಕೆ : ಹವಾಮಾನ ಇಲಾಖೆ ಸೂಚನೆ

ಮಂಗಳೂರು : ಇಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೆಲ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಕೂಡ ಘೋಷಣೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಇಂದು ರಾಜ್ಯದ ವಿವಿಧ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಕಲಬುರ್ಗಿ, ದಕ್ಷಿಣ ಕನ್ನಡ, ಉಡುಪಿ,ಬೀದರ್, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಭಾರೀ ಮಳೆಯಿಂದಾಗಿ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ಥಗೊಂಡಿದೆ.

ಇನ್ನು, ಮಾಹಿತಿ ಬಿಡುಗಡೆ ಮಾಡಿರುವಂತ ಭಾರತೀಯ ಹವಾಮಾನ ಇಲಾಖೆಯು ಇಂದು ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ದಾವಣಗೆರೆ ಮತ್ತು ಮೈಸೂರು ಜಿಲ್ಲೆಗಳಲ್ಲಿ 64.5ಮಿ.ಮಿ ನಿಂದ 115.5ರಷ್ಟು ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ನಾಳೆ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ 115.6ಮಿಮಿ ನಿಂದ 204.4ಮಿಮಿ ನಷ್ಟು ಭಾರೀ ಮಳೆಯಾಗಲಿದೆ ಎಂಬುದಾಗಿ ಮಾಹಿತಿ ನೀಡಿದೆ.

RELATED ARTICLES

Related Articles

TRENDING ARTICLES