ಕೊಲೊಂಬೋ: ಶ್ರೀಲಂಕಾದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿ ಹತೋಟಿಗೆ ಬರುವ ಲಕ್ಷಣಗಳು ಕಾಣಿಸ್ತಿಲ್ಲ.. ಪ್ರತಿಭಟನಾಕಾರರ ಹೋರಾಟ ತಗ್ಗಿಸುವ ಪ್ರಯತ್ನ ಮಾಡ್ತಿದ್ರೂ ಹತೋಟಿಗೆ ಬರುತ್ತಿಲ್ಲ.. ಹೀಗಾಗಿ, ಸೇನೆ ಫೀಲ್ಡಿಗಿಳಿದೆ. ಈ ಮಧ್ಯೆ, ತುರ್ತು ಪರಿಸ್ಥಿತಿ ಘೋಷಿಸಲಾಗಿದ್ದು, ಗೊಟಬಯ ದೇಶ ಬಿಟ್ಟು ಸಿಂಗಾಪುರ ಸೇರಿಕೊಂಡಿದ್ದಾರೆ.
ಶ್ರೀಲಂಕಾದಲ್ಲಿ ಪರಿಸ್ಥಿತಿ ವಿಕೋಪಕ್ಕೆ ಹೋಗ್ತಿದೆ. ಪ್ರತಿಭಟನಾಕಾರರು ಹಿಂಸಾಚಾರಕ್ಕಿಳಿದ್ದಿದ್ದು, ಸರ್ಕಾರಿ ಕಟ್ಟಡಗಳಲ್ಲಿ ಅಲ್ಲೋಲ-ಕಲ್ಲೋಲ ಸೃಷ್ಠಿಸಿದ್ದಾರೆ. ಲಂಕಾ ದಹನಕ್ಕಿಳಿದಿರುವ ಜನರನ್ನು ಕಂಟ್ರೋಲ್‌ಗೆ ತರುವಲ್ಲಿ ಪೊಲೀಸರಿಗೆ ಇನ್ನಿಲ್ಲದ ಸರ್ಕಸ್ ಮಾಡುವಂತಾಗಿದೆ. ಈ ಹಿನ್ನೆಲೆಯಲ್ಲಿ ಫೀಲ್ಡಿಗಿಳಿದಿದೆ ಲಂಕಾ ಸೇನೆ.
ಅಧ್ಯಕ್ಷ ಗೊಟಬಯ ದೇಶ ಬಿಟ್ಟು ಪರಾರಿಯಾಗಿದ್ದಾರೆ. ಇತ್ತ, ಪ್ರಧಾನಿ ಕಚೇರಿಗೆ ನುಗ್ಗಿದ ಜನತೆ ಅಲ್ಲೋಲ -ಕಲ್ಲೋಲ ಸೃಷ್ಟಿಸಿದ್ದಾರೆ. ಇತ್ತ, ಜನರ ಆಕ್ರೋಶದ ನಡುವೆ ರನಿಲ್ ವಿಕ್ರಮ್ ಸಿಂಘೆ ಘರ್ಜನೆ ಮಾಡಿದ್ದಾರೆ. ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದಾರೆ. ದೇಶಾದ್ಯಂತ ಕರ್ಫ್ಯೂ ಜಾರಿಯಾಗಿದ್ದು, ಪ್ರತಿಭಟನಾಕಾರರನ್ನು ಹತೋಟಿಗೆ ತರುವಂತೆ ಸೇನೆಗೆ ಸೂಚಿಸಿದ್ದಾರೆ.
ಶ್ರೀಲಂಕಾ ಅಧ್ಯಕ್ಷ ಗೋಟಾಬಯ ರಾಜಪಕ್ಸೆ ದೇಶದಿಂದ ಪಲಾಯನಗೈದು ಮಾಲ್ಡೀವ್‌ಸನ ಮಾಲೆಯಲ್ಲಿ ಆಶ್ರಯ ಪಡೆದಿದ್ದಾರೆ ಎನ್ನಲಾಗಿದ್ದು, ಈ ಬೆನ್ನಲ್ಲೇ ದ್ವೀಪರಾಷ್ಟ್ರದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಅಧ್ಯಕ್ಷ ಗೋಟಾಬಯ ರಾಜಪಕ್ಸೆ ಪಲಾಯನದ ಸುದ್ದಿ ಹೊರಬಿದ್ದ ಕೂಡಲೇ ರಾಜಧಾನಿ ಕೊಲಂಬೊದಲ್ಲಿ ಮತ್ತೆ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿದ್ದವು. ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ಕಚೇರಿ ಬಳಿ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಸಿಡಿಸಿದ್ದಾರೆ.
ಹೆಚ್ಚುತ್ತಿರುವ ಪ್ರತಿಭಟನೆಗಳನ್ನು ನಿಯಂತ್ರಿಸಲು ಕೊಲಂಬೊ ಸೇರಿದಂತೆ ಪಶ್ಚಿಮ ಪ್ರಾಂತ್ಯದಾದ್ಯಂತ ಅನಿರ್ದಿಷ್ಟ ಕರ್ಫ್ಯೂ ವಿಧಿಸಲಾಗಿದೆ.. ಫ್ಯಾಸಿಸ್ಟರು ಸರ್ಕಾರವನ್ನು ವಶಪಡಿಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಶ್ರೀಲಂಕಾದ ಹಂಗಾಮಿ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ವಾಗ್ದಾಳಿ ನಡೆಸಿದ್ದಾರೆ. ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸ ಮಾಲ್ಡೀವ್ಸ್‌ಗೆ ಪಲಾಯನಗೈದ ನಂತರ ದೇಶದಾದ್ಯಂತ ಪ್ರತಿಭಟನೆಗಳು ತೀವ್ರಗೊಂಡಿವೆ. ಭದ್ರತಾ ಪಡೆಗಳ ಮೇಲೆ ಆಕ್ರೋಶಭರಿತ ನಾಗರಿಕರು ದಾಳಿ ನಡೆಸುತ್ತಿದ್ದಾರೆ. ಇದೇ ವೇಳೆ, ಕೊಲಂಬೊದಲ್ಲಿರುವ ಪ್ರಧಾನಿ ಕಚೇರಿಯನ್ನು ಪ್ರತಿಭಟನಾಕಾರರು ವಶಕ್ಕೆ ಪಡೆದುಕೊಂಡಿದ್ದಾರೆ. ಶ್ರೀಲಂಕಾದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಹೇಳಿಕೆ ನೀಡಿರುವ ಹಂಗಾಮಿ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ, ದೇಶದಲ್ಲಿ ಶಾಂತಿ–ಸುವ್ಯವಸ್ಥೆ ಕಾಪಾಡುವಂತೆ ಶ್ರೀಲಂಕಾದ ಸೇನೆ ಮತ್ತು ಪೋಲೀಸರಿಗೆ ಆದೇಶಿಸಿದ್ದಾರೆ.
ಬ್ಯೂರೋ ರಿಪೋರ್ಟ್ ಪವರ್ ಟಿವಿ