ಬೆಂಗಳೂರು : ರಿಂಗ್ನಲ್ಲಿ ಸೆಣೆಸಾಡುತ್ತಿದ್ದಂತೆ ಎದುರಾಳಿ ಏಟಿಗೆ ಸಾವನ್ನಪ್ಪಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.
ಕಿಕ್ ಬಾಕ್ಸಿಂಗ್ನಲ್ಲಿ ಪಾಲ್ಗೊಂಡಿದ್ದ ಮೈಸೂರು ಯುವಕ ನಿಖಿಲ್ (24) ಸಾವನ್ನಪ್ಪಿದ್ದಾನೆ. ರಿಂಗ್ನಲ್ಲಿ ಸೆಣೆಸಾಡುತ್ತಿದ್ದಂತೆ ಎದುರಾಳಿ ಒಂದೇ ಏಟಿಗೆ ಸಾವನ್ನಪ್ಪಿದ್ದಾನೆ. ನಿಖಿಲ್ ಕೆಳಗೆ ಬೀಳುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ.
K 1 ಕಿಕ್ ಬಾಕ್ಸರ್ ಆರ್ಗನೈಸೇಷನ್ ವತಿಯಿಂದ ಆಯೋಜನೆಗೊಂಡಿದ್ದ ಸ್ಪರ್ಧೆಯಲ್ಲಿ ಬೆಂಗಳೂರಿನ ಕೆಂಗೇರಿಯಲ್ಲಿ ನಡೆಯುತ್ತಿದ್ದ ಸ್ಪರ್ಧೆಯಲ್ಲಿ ಎದುರಾಳಿ ತಲೆಗೆ ಹೊಡೆದ ಒಂದೇ ಏಟಿಗೆ ಬಾಕ್ಸಿಂಗ್ ರಿಂಗ್ ನಲ್ಲಿ ಕೆಳಗೆ ಬಿದ್ದ ನಿಖಿಲ್ನನ್ನು ತಕ್ಷಣ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಎರಡು ದಿನಗಳ ಕಾಲ ಕೋಮಾದಲ್ಲಿದ್ದ ನಿಖಿಲ್. ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಾವನ್ನಪ್ಪಿದ್ದಾರೆ.