ಬಿಹಾರ : ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು ರೂಪಿಸಿದ್ದ ಇಬ್ಬರು ಶಂಕಿತ ಭಯೋತ್ಪಾದಕರನ್ನು ಪಾಟ್ನಾದಲ್ಲಿ ಬಂಧಿಸಲಾಗಿದೆ.
ಪೊಲೀಸರ ಪ್ರಕಾರ ಉಗ್ರರಿಗೆ 2047ರ ವೇಳೆಗೆ ಭಾರತವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡಲು ತರಬೇತಿ ನೀಡಲಾಗುತ್ತಿತ್ತು. ಜುಲೈ 12 ರಂದು ಮೋದಿ ಭೇಟಿಯ ಸಂದರ್ಭದಲ್ಲಿ ಅವರನ್ನು ಗುರಿಯಾಗಿಸಿ ದಾಳಿ ನಡೆಸುವ ಸಂಚು ಕೂಡ ರೂಪಿಸಲಾಗಿತ್ತು ಎಂದು ತಿಳಿದುಬಂದಿದೆ.
ಬಂಧಿತ ಆರೋಪಿಗಳನ್ನು ಅಥರ್ ಪರ್ವೇಜ್ ಮತ್ತು ಎಂಡಿ ಜಲಾಲುದ್ದೀನ್ ಎಂದು ಗುರುತಿಸಲಾಗಿದೆ. ಪ್ರಧಾನಿ ಮೋದಿ ಭೇಟಿಗೆ 15 ದಿನಗಳ ಮೊದಲು ಶಂಕಿತ ಭಯೋತ್ಪಾದಕರಿಗೆ ಫುಲ್ವಾರಿ ಷರೀಫ್‌ನಲ್ಲಿ ತರಬೇತಿ ನೀಡಲಾಗುತ್ತಿತ್ತು. ಅವರು ಜುಲೈ 6 ಮತ್ತು 7 ರಂದು ಪ್ರಧಾನಿ ಮೋದಿಯನ್ನು ಗುರಿಯಾಗಿಸಲು ಸಂಚು ರೂಪಿಸಲು ಸಭೆಗಳನ್ನು ನಡೆಸಿದ್ದರು ಎಂದು ತಿಳಿದು ಬಂದಿದೆ.
ಶಂಕಿತ ಉಗ್ರರ ಫುಲ್ವಾರಿ ಷರೀಫ್ ಕಚೇರಿ ಮೇಲೆ ಬಿಹಾರ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಪೊಲೀಸರು ಹಲವು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅವುಗಳಲ್ಲಿ ‘2047 ಇಂಡಿಯಾ ಇಸ್ಲಾಮಿಕ್ ಆಳ್ವಿಕೆ ಇಂಡಿಯಾ ಇಸ್ಲಾಮಿಕ್ ಕಡೆಗೆ’ ಎಂಬ ದಾಖಲೆ ಸಹ ಸಿಕ್ಕಿದೆ. ಪೊಲೀಸರು ಬಂಧಿತರ ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತರನ್ನು ಜಾರ್ಖಂಡ್‌ನ ನಿವೃತ್ತ ಪೊಲೀಸ್ ಅಧಿಕಾರಿ ಮೊಹಮ್ಮದ್ ಜಲಾವುದ್ದೀನ್ ಮತ್ತು ಅಥರ್ ಪರ್ವೇಜ್ ಎಂದು ಗುರುತಿಸಲಾಗಿದೆ.