ದೆಹಲಿ: ಸುಪ್ರೀಂಕೋರ್ಟ್ನಲ್ಲಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿಗೆ ಭಾರೀ ಮುಖಂಭವಾಗಿದೆ. ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠದಲ್ಲಿ ಸಿಜೆ ರಂಜನ್ ಗೋಗಯ್ ಸಿಬಿಐ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದರು. ರಾಜೀವ್ ಕುಮಾರ್ ಫೆಬ್ರವರಿ 20ರಂದು ಮೇಘಾಲಯದ ಶಿಲ್ಲಾಂಗ್ನಲ್ಲಿ ಸಿಬಿಐ ಮುಂದೆ ಹಾಜರಾಗುವಂತೆ ಕೋರ್ಟ್ ನಿರ್ದೇಶಿಸಿದೆ.
ಚಿಟ್ಫಂಡ್ ಹಗರಣದ ಸಂಬಂಧ ಕಮಿಷನರ್ ರಾಜೀವ್ ಕುಮಾರ್ ವಿಚಾರಣೆಗೆ ಬಂದ ಸಿಬಿಐ ಅಧಿಕಾರಿಗಳನ್ನು ಕೊಲ್ಕತ್ತಾ ಪೊಲೀಸರು ಬಂಧಿಸಿದ್ದರು. ಘಟನೆ ಸಂಬಂಧ ಸಿಬಿಐ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಸಿಬಿಐ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನಾವು ಕೋಲ್ಕತ್ತಾ ನಗರ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರನ್ನ ವಿಚಾರಣೆಗೆ ಹಾಜರಾಗಲು ಸೂಚಿಸಿದ್ದೇವೆ. ಅವರು ಯಾಕೆ ಸಿಬಿಐ ವಿಚಾರಣೆಗೆ ಹಾಜರಾಗಿಲ್ಲ? ವಿಚಾರಣೆಗೆ ಹಾಜರಾಗಲು ಏನು ಸಮಸ್ಯೆ? ಎಂದು ಕೋರ್ಟ್ ಪ್ರಶ್ನಿಸಿದೆ. ಸುಪ್ರೀಂಕೋರ್ಟ್ ಏನೇ ತೀರ್ಪು ನೀಡಿದ್ರೂ ಪಾಲಿಸಲು ನಾವು ಬದ್ಧ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.