ಬೆಂಗಳೂರು : ಮುಂಗಾರು ಅಧಿವೇಶನ ನಡೆಯುತ್ತಿರುವ ಲೋಕಸಭೆ ಮತ್ತು ರಾಜ್ಯಸಭೆಯು ಗದ್ದಲಕ್ಕೆ ಸಾಕ್ಷಿಯಾಯಿತು.
ಬೆಲೆ ಏರಿಕೆ, ಜಿಎಸ್ಟಿ ಹೇರಿಕೆ, ಅಗ್ನಿಪಥ ಯೋಜನೆ ಬಗ್ಗೆ ಚರ್ಚೆಗೆ ಅವಕಾಶ ಕೊಡುವಂತೆ ವಿರೋಧ ಪಕ್ಷಗಳು ಪಟ್ಟು ಹಿಡಿದವು. ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂದೂ ಕೂಡ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ಸಂಸದರು, ಜಿಎಸ್ಟಿ ವಾಪಸ್ ಪಡೆಯಲು ಒತ್ತಾಯಿಸಿದರು. ಸದನದ ಬಾವಿಗಿಳಿದು ಪ್ರತಿಭಟಿಸುತ್ತಿರುವ ಸಂಸದರು, ಗಬ್ಬರ್ ಟ್ಯಾಕ್ಸ್ ಜನರಿಗೆ ಹೊರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಲೋಕಸಭೆ ಮತ್ತು ರಾಜ್ಯ ಸಭೆ ಕಲಾಪವನ್ನ ಎರಡು ಗಂಟೆವರೆಗೆ ಮುಂದೂಡಲಾಯಿತು.