Saturday, November 23, 2024

ಸೋನಿಯಾ ಗಾಂಧಿ ವಿಚಾರಣೆ ಖಂಡಿಸಿ ಪ್ರತಿಭಟನೆ: ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದಲ್ಲಿ ಎರಡನೇ ಬಾರಿಗೆ ವಿಚಾರಣೆಗೆ ಇಂದು ಹಾಜರಾಗಿದ್ದಾರೆ.

ಸೋನಿಯಾ ಅವರನ್ನು ವಿಚಾರಣೆಗೆ ಒಳಪಡಿಸುತ್ತಿರುವುದನ್ನು ವಿರೋಧಿಸಿ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದಾರೆ.

ಅಲ್ಲದೆ, ರಾಷ್ಟ್ರಪತಿ ಭವನಕ್ಕೆ ಪ್ರತಿಭಟನಾ ಮೆರವಣಿಗೆ ತೆರಳುವ ಸಂದರ್ಭದಲ್ಲಿ ಪೊಲೀಸರು ರಾಹುಲ್ ಗಾಂಧಿಯವರನ್ನು ವಶಕ್ಕೆ ಪಡೆದಿದ್ದಾರೆ.

ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸಹಿತ ಹಲವು ನಾಯಕರನ್ನು ಪೊಲೀಸರು ಬಂಧಿಸಿ ಕರೆದೊಯ್ದಿದ್ದಾರೆ. ಅದಕ್ಕೂ ಮುನ್ನ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್ ನಾಯಕರು, ಸತ್ಯಾಗ್ರಹದ ಮೂಲಕ ಸೋನಿಯಾ ವಿಚಾರಣೆಯನ್ನು ಖಂಡಿಸಿದ್ದರು.

RELATED ARTICLES

Related Articles

TRENDING ARTICLES