ನವದೆಹಲಿ: ದ್ರೌಪದಿ ಮುರ್ಮು ಅವರು ನೂತನ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು.
ಪ್ರಧಾನಿ ಮೋದಿ ಅವರು ಈ ಭೇಟಿ ಕುರಿತು ರಾಷ್ಟ್ರಪತಿ ಭವನ ಟ್ವೀಟ್ ಮಾಡಿದ್ದಾರೆ.
ಜಾರ್ಖಂಡ್‌ನ ಮಾಜಿ ರಾಜ್ಯಪಾಲೆ ಆಗಿರುವ ಮುರ್ಮು ಅವರು ದೇಶದ 15ನೇ ರಾಷ್ಟ್ರಪತಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು.
Prime Minister @narendramodi called on President Droupadi Murmu at Rashtrapati Bhavan, first time after her assumption of office yesterday. pic.twitter.com/o8C0IiVGCZ
— President of India (@rashtrapatibhvn) July 26, 2022
ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಪ್ರಮಾಣವಚನ ಸ್ವೀಕರಿಸಿ ಮಾತನಾಡಿದ್ದ ಮುರ್ಮು ಅವರು, ರಾಷ್ಟ್ರಪತಿ ಹುದ್ದೆಗೆ ಏರಿದ್ದು ನನ್ನ ವೈಯಕ್ತಿಕ ಸಾಧನೆಯಲ್ಲ. ಭಾರತದ ಎಲ್ಲ ಬಡವರ ಸಾಧನೆಯಾಗಿದೆ. ಈ ಹುದ್ದೆಗೆ ನನ್ನ ಹೆಸರನ್ನು ಘೋಷಿಸಿದ್ದು, ದೇಶದಲ್ಲಿ ಬಡವರು ಕನಸನ್ನು ಕಾಣುವುದಷ್ಟೇ ಅಲ್ಲ. ಅದನ್ನು ಸಾಕಾರಗೊಳಿಸಿಕೊಳ್ಳಬಹುದು ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದರು.