ಮಂಗಳೂರು : ಬಿಜೆಪಿ ಯುವ ಮುಖಂಡನನ್ನು, ಹತ್ಯೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ.
ಬೆಳ್ಳಾರೆಯ ಮೇಲಿನ ಪೇಟೆಯಲ್ಲಿ ಚಿಕನ್ ಅಂಗಡಿ ನಡೆಸುತ್ತಿದ್ದ, ಬಿಜೆಪಿ ಯುವ ಮೋರ್ಚಾ ಮುಖಂಡನೂ ಆಗಿರುವ ಪ್ರವೀಣ್ ನೆಟ್ಟಾರು ಮೃತಪಟ್ಟಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಗುಂಪು ಹಲ್ಲೆಗೊಳಗಾಗಿ ಮೃತಪಟ್ಟ ಯುವಕನೊಬ್ಬನ ಕೊಲೆಗೆ ಪ್ರತೀಕಾರವಾಗಿ ಈ ಕೊಲೆ ನಡೆದಿದೆ ಎಂದು ಹೇಳಲಾಗಿದ್ದು, ಅಮಾಯಕನ ಕೊಲೆಗೆ ನ್ಯಾಯ ಒದಗಿಸಿಕೊಡುವಂತೆ ಆಗ್ರಹಿಸಿ ಪುತ್ತೂರಿನಲ್ಲಿ ರಾತ್ರೋರಾತ್ರಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.