ಬೆಂಗಳೂರು: ಸುಳ್ಯ ತಾಲೂಕಿನ ಬೆಳ್ಳಾರುವಿನಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಭಜರಂಗದಳ ಮುಖಂಡ ಪ್ರವೀಣ್ ನೆಟ್ಟಾರು ಬಗ್ಗೆ ಸಂಸದ ತೇಜಸ್ವಿ ಸೂರ್ಯ ಅವರು ಖಾಸಗಿ ಮಾಧ್ಯಮವೊಂದಕ್ಕೆ ನೀಡಿರುವ ಹೇಳಿಕೆಯನ್ನು ಉಲ್ಲೇಖಿಸಿ ಉಲ್ಲಾಳ ಕಾಂಗ್ರೆಸ್ ಶಾಸಕ ಯು.ಟಿ ಖಾದರ್ ಅವರು, ಸೂರ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ಕುರಿತು ಇಂದು ಟ್ವೀಟ್ ಮಾಡಿರುವ ಅವರು, “ಎಲ್ಲರಿಗೂ ರಕ್ಷಣೆ ನೀಡಲು ಸಾಧ್ಯವೇ”? ಎಂದು ತೇಜಸ್ವಿ ಸೂರ್ಯ ನೀಡಿರುವ ಹೇಳಿಕೆಯೇ ಅವರ ಅಪ್ರಬುದ್ದತೆ ತೋರಿಸುತ್ತಿದೆ. ಸಮಾಜದಲ್ಲಿ ಶೇಕಡ ಒಂದರಷ್ಟಿರುವ ಘಾತುಕಶಕ್ತಿಗಳನ್ನು ಮಟ್ಟಹಾಕಿದರೆ, ಬಾಕಿ ಇರುವ ಶೇಕಡಾ 99 ರಷ್ಟು ಜನರಲ್ಲಿ ಧೈರ್ಯ ಹಾಗೂ ವಿಶ್ವಾಸ ಮೂಡಲಿದೆ’ ಎಂದಿದ್ದಾರೆ.
‘ಭದ್ರತೆ ಬಗ್ಗೆ ವಿಚಾರ ಮಾಡುವುದು ಬಿಟ್ಟು ಭದ್ರತೆ ನೀಡಲು ಸಾಧ್ಯವೇ? ಎಂದು ಆಡಳಿತ ಪಕ್ಷದವರಾಗಿಯೇ ಪ್ರಶ್ನಿಸುವುದು ನಿಮ್ಮ ಅಸಮರ್ಥತೆ ಹಾಗೂ ಅಸಹಾಯಕತೆಯನ್ನು ತೋರಿಸುತ್ತಿದೆ. ಜನ ಇದೆಲ್ಲವನ್ನೂ ಗಮನಿಸುತ್ತಿದ್ದಾರೆ. ನೆನಪಿರಲಿ’ ಎಂದು ಸಂಸದ ತೇಜಸ್ವಿ ಸೂರ್ಯ ಅವರನ್ನುದ್ದೇಶಿಸಿ ಟ್ವೀಟ್ ಮಾಡಿದ್ದಾರೆ.
“ಎಲ್ಲರಿಗೂ ರಕ್ಷಣೆ ನೀಡಲು ಸಾಧ್ಯವೇ” ? ಎಂದು @Tejasvi_Surya ತೇಜಸ್ವಿ ಸೂರ್ಯ ನೀಡಿರುವ ಹೇಳಿಕೆಯೇ ಅವರು ಅಪ್ರಬುದ್ದತೆ ತೋರಿಸುತ್ತಿದೆ. ಸಮಾಜದಲ್ಲಿರುವ ಸರಿಸುಮಾರು ಶೇಕಡ ಒಂದರಷ್ಟಿರುವ ಘಾತುಕಶಕ್ತಿಗಳನ್ನ ಮಟ್ಟಹಾಕಿದರೆ ಬಾಕಿ ಇರುವ ಶೇಕಡಾ 99 ರಷ್ಟು ಜನರಲ್ಲಿ ಧೈರ್ಯ ಹಾಗೂ ವಿಶ್ವಾಸ ಮೂಡಲಿದೆ. (1) @CMofKarnataka
— UT Khadér (@utkhader) July 28, 2022